ದಾವಣಗೆರೆ :ಓಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ಜೊತೆಗೆ, ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಈಗಾಗಲೇ, ಕೇರಳದಿಂದ ಬಂದ ಪ್ರತಿಯೊಬ್ಬರಿಗೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿಂದು ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ. ನಾವು ಈಗ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುತ್ತಿದ್ದೇವೆ. ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು.
ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲು ಆಗಲ್ಲ. ಶಾಲಾ-ಕಾಲೇಜ್ಗಳಲ್ಲಿ ಕೋವಿಡ್ ಬಗ್ಗೆ ನಿಗಾವಹಿಸಿ ಅಂತಾ ಹೇಳಲಾಗಿದೆ. ರಜೆ ನೀಡುವ ಅಗತ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.