ದಾವಣಗೆರೆ: ಮುಂಬರುವ ಚುನಾವಣೆಗೆ ಸಂಬಂಧಪಟ್ಟಂತೆ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ ಮೂರನೇ ಅಲೆ ಹಿನ್ನೆಲೆ ಆರೋಗ್ಯ ಸೇವಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲು ವರಿಷ್ಠರ ಸೂಚನೆಯಾಗಿದೆ ಎಂದಿದ್ದಾರೆ.
ಮುಂಬರುವ ಚುನಾವಣೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮದ ಬಗ್ಗೆ ಚರ್ಚೆಯಾಗಿದೆ: ಸಿಎಂ ಬೊಮ್ಮಾಯಿ - ಸಿಎಂ ಬಸವರಾಜ ಬೊಮ್ಮಾಯಿ
ಇಂದು ಎರಡನೇ ದಿನದ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ ಬೊಮ್ಮಾಯಿ
ಆರೋಗ್ಯ ಸೇವಾ ಕಾರ್ಯಕರ್ತರು ಬೂತ್ ಮಟ್ಟದಿಂದ ಕಾರ್ಯಪ್ರವೃತ್ತರಾಗಲಿದ್ದಾರೆ. 3ನೇ ಅಲೆ ಎದುರಿಸುವ ಕುರಿತಂತೆ ಚರ್ಚೆ ನಡೆಸಲಾಗಿದೆ. ಜೊತೆಗೆ ಇಂದು ನಡೆಯಲಿರುವ ಸಭೆಯಲ್ಲಿಯೂ ಹಲವು ನಿರ್ಣಯಗಳ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರತಿ ಪಕ್ಷದವರಿಗೆ ಲಸಿಕೆ ಜ್ವರ ಬಂದಿದೆ: ಪ್ರಹ್ಲಾದ್ ಜೋಶಿ