ದಾವಣಗೆರೆ : ಹಾಲುಮತ ಸಮುದಾಯವನ್ನು ಎಸ್ಟಿ ಸೇರ್ಪಡೆಗೊಳಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಹರಿಹರ ತಾಲೂಕಿನ ಬೆಳ್ಳೂಡಿ ಕನಕ ಗುರುಪೀಠದಲ್ಲಿ ಮಾತನಾಡಿದ ಅವರು, ಹಾಲುಮತ ಸಮುದಾಯದ ಕುಲಶಾಸ್ತ್ರ ಅಧ್ಯಯನಕ್ಕೆ ಈಗಾಗಲೇ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಲಾಗಿದೆ.
ಮೀಸಲಾತಿ ಕುರಿತಂತೆ ಸಿಎಂ ಬಿ ಎಸ್ ಯಡಿಯೂರಪ್ಪ ಮಾತನಾಡಿರುವುದು.. ಅಲ್ಲದೆ, ಮೀಸಲಾಯಿಯನ್ನು ಶೇ.50ಕ್ಕೆ ಏರಿಸಲು ಅನುವು ಮಾಡಿಕೊಡುವಂತೆ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಕೋರ್ಟ್ ಮೀಸಲಾತಿ ಹೆಚ್ಚಿಸಲು ಅವಕಾಶ ಕೊಟ್ಟರೆ ಎಲ್ಲಾ ಸಮುದಾಯಗಳಿಗೂ ಹೆಚ್ಚಿನ ಮೀಸಲಾತಿ ನೀಡಲು ಸಾಧ್ಯವಾಗುತ್ತದೆ ಎಂದರು.
ಓದಿ : ಮುಂದಿನ ಚುನಾವಣೆಗೆ ಸಿದ್ದರಾಮಯ್ಯರನ್ನ ಸಿಎಂ ಮಾಡ್ತೇವೆಂದು ಹೇಳಲಿ, ಆಗ ಒಪ್ಪುತ್ತೇನೆ- ಹೆಚ್ ಡಿ ರೇವಣ್ಣ
ಚಿತ್ರದುರ್ಗದಲ್ಲಿ ಕನಕ ಏಕಶಿಲಾ ವಿಗ್ರಹ ನಿರ್ಮಾಣಕ್ಕೆ 5 ಕೋಟಿ ರೂ. ಹಣ ಬಿಡುಗಡೆ ಮಾಡುತ್ತೇವೆ. ರಾಯಣ್ಣ ಪ್ರಾಧಿಕಾರಕ್ಕೆ ಹಂಚಿಕೆಯಾದ ಅನುದಾನದಲ್ಲಿ 30 ಕೋಟಿ ರೂ. ಬಿಡುಗಡೆಯಾಗಲು ಬಾಕಿಯಿದೆ ಎಂದು ಹೇಳಲಾಗ್ತಿದೆ. ಅದನ್ನೂ ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದರು.