ದಾವಣಗೆರೆ:ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಆಸ್ಪತ್ರೆಗೆ ಸೇರಿಸಿದರು.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆ ಸೇರಿಸಿದ ರೇಣುಕಾಚಾರ್ಯ - davanagere news
ಬೆನಕನಹಳ್ಳಿ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿದ್ದ ಇಬ್ಬರು ರಸ್ತೆಯಲ್ಲಿ ಬಿದ್ದಿದ್ದರು. ಈ ಮಾರ್ಗದಲ್ಲೇ ಸಂಚರಿಸುತ್ತಿದ್ದ ರೇಣುಕಾಚಾರ್ಯ ಗಾಯಾಳುಗಳನ್ನು ನೋಡಿದ ತಕ್ಷಣ ಕಾರಿನಿಂದಿಳಿದು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರು.
ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ರೇಣುಕಾಚಾರ್ಯ
ಬೆನಕನಹಳ್ಳಿ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿದ್ದ ಇಬ್ಬರು ರಸ್ತೆಯಲ್ಲಿ ಬಿದ್ದಿದ್ದರು. ಈ ಮಾರ್ಗದಲ್ಲೇ ಸಂಚರಿಸುತ್ತಿದ್ದ ರೇಣುಕಾಚಾರ್ಯ ಗಾಯಾಳುಗಳನ್ನು ನೋಡಿದ ತಕ್ಷಣ ಕಾರಿನಿಂದಿಳಿದು, ತಮ್ಮ ಬೆಂಗಾವಲು ವಾಹನದಲ್ಲಿ ಗಾಯಾಳುಗಳನ್ನು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದರು.
ವೈದ್ಯಾಧಿಕಾರಿಗಳಿಗೆ ಕರೆ ಮಾಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಇದೇ ವೇಳೆ, ಗಂಭೀರವಾದ ಗಾಯಗಳಾಗಿದ್ದರೆ, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡುವಂತೆಯೂ ತಿಳಿಸಿದರು.