ದಾವಣಗೆರೆ:ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.
ದಾವಣಗೆರೆಯಲ್ಲಿ ಮೇ 31ರವರೆಗೆ ಸಂಪೂರ್ಣ ಲಾಕ್‌ಡೌನ್: ಡಿಸಿ - Davanagere
ಕೊರೊನಾ ಸೋಂಕು ನಿಯಂತ್ರಣಕ್ಕೆ ದಾವಣಗೆರೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಮೇ 31ರವರೆಗೆ ಸಂಪೂರ್ಣ ಲಾಕ್‌ಡೌನ್ ಮುಂದುವರಿಕೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಇಂದು ಬೆಳಗ್ಗೆ 10 ಗಂಟೆಯವರೆಗೂ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಮತ್ತೆ ಒಂದು ವಾರ (ಮೇ 31ರವರೆಗೆ) ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ದಾವಣಗೆರೆ ಜಿಲ್ಲಾಡಳಿತ ಈ ತೀರ್ಮಾನಕ್ಕೆ ಬಂದಿದ್ದು, ಪ್ರತಿದಿನ ಬೆಳಿಗ್ಗೆ 10 ಗಂಟೆಯವರೆಗೂ ಹಾಲು, ಮೊಟ್ಟೆ ಹಾಗೂ ಡೈರಿ ಉತ್ಪನ್ನಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಒಂದು ವಾರ ಮದ್ಯದ ಅಂಗಡಿ ಸಂಪೂರ್ಣ ಬಂದ್ ಮಾಡುವಂತೆ ಸೂಚಿಸಲಾಗಿದೆ.