ದಾವಣಗೆರೆ :ಕೊರೊನಾ ಮಾರ್ಗಸೂಚಿಗಳನ್ನು ಪಾಲನೆ ಮಾಡಿ ಎಂದು ರಾಜಕೀಯ ನಾಯಕರು ಹೇಳುತ್ತಾರೆ. ಆದರೆ, ಜಿಲ್ಲೆಯ ಜಗಳೂರಿನ ಕಾಂಗ್ರೆಸ್ ಮಾಜಿ ಶಾಸಕನೋರ್ವ ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ನಡೆದಿದೆ.
ಜಗಳೂರು ಕ್ಷೇತ್ರದ ಮಾಜಿ ಶಾಸಕ ಹೆಚ್ ಪಿ ರಾಜೇಶ್ ಎಂಬುವರು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ನೂರಾರು ಕಾರ್ಯಕರ್ತರನ್ನು ಒಗ್ಗೂಡಿಸಿ ಜಿಲ್ಲೆಯ ಜಗಳೂರು ಪಟ್ಟಣದ ಹಾಲ್‌ವೊಂದರಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಕೋವಿಡ್ ನಿಯಯ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಕಾಂಗ್ರೆಸ್ ಮಾಜಿ ಶಾಸಕ ಓದಿ: ನಟ ದರ್ಶನ್ ಹೆಸರಲ್ಲಿ ವಂಚನೆ ಪ್ರಕರಣ: ವೈರಲ್ ಆಗಿರುವ ವಾಟ್ಸಾಪ್ ಚಾಟಿಂಗ್, ಆಡಿಯೋ ಯಾರದ್ದು? ಸ್ಪಷ್ಟನೆ ನೀಡುವರೇ ಉಮಾಪತಿ?
ಮಾಜಿ ಶಾಸಕ ಹೆಚ್ ಪಿ ರಾಜೇಶ್ ಕೆಲ ದಿನಗಳ ಹಿಂದೆ ಬ್ಲಾಕ್ ಫಂಗಸ್ನಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಸಂಪೂರ್ಣವಾಗಿ ಗುಣಮುಖರಾದ ಬಳಿಕ ಇದೇ ಮೊದಲ ಬಾರಿಗೆ ಹೆಲಿಕಾಪ್ಟರ್ನಲ್ಲಿ ಜಗಳೂರಿಗೆ ಆಗಮಿಸಿದ ಅವರಿಗೆ ಅಭಿಮಾನಿಗಳು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.