ದಾವಣಗೆರೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರನ್ನಾಗಿ ಜಿಲ್ಲಾ ಕಾಂಗ್ರೆಸ್ ಮುಖಂಡ ಡಿ. ಬಸವರಾಜ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆದೇಶಿಸಿದ್ದಾರೆ.
ದಾವಣಗೆರೆ: ಕೆಪಿಸಿಸಿ ವಕ್ತಾರರಾಗಿ ಕಾಂಗ್ರೆಸ್ ಮುಖಂಡ ಡಿ.ಬಸವರಾಜ್ ನೇಮಕ - ದಾವಣಗೆರೆ ಸುದ್ದಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರನ್ನಾಗಿ ಜಿಲ್ಲಾ ಕಾಂಗ್ರೆಸ್ ಮುಖಂಡ ಡಿ. ಬಸವರಾಜ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆದೇಶಿಸಿದ್ದಾರೆ.

ಕೆಪಿಸಿಸಿ ವಕ್ತಾರರಾಗಿ ಜವಾಬ್ದಾರಿ ವಹಿಸಿಕೊಂಡು ಸಂವಹನ ಹಾಗೂ ಮಾಧ್ಯಮ ಮುಖ್ಯಸ್ಥರು ನೀಡುವ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನಗಳ ಮೇಲೆ ತಕ್ಷಣವೇ ಕಾರ್ಯ ಪ್ರವೃತ್ತರಾಗುವಂತೆ ಶಿವಕುಮಾರ್ ಅವರು ಸೂಚಿಸಿದ್ದು, ಕೊಟ್ಟಿರುವ ಹುದ್ದೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಡಿ. ಬಸವರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ. ಕೃಷಿ ಮಸೂದೆಗಳು ಹಾಗೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದು ಖಂಡನೀಯ. ಸೆಪ್ಟಂಬರ್ 28 ರಂದು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ದಾವಣಗೆರೆಯಲ್ಲಿ ನಾವು ಬೆಂಬಲಿಸುತ್ತೇವೆ ಎಂದು ತಿಳಿಸಿದರು.