ದಾವಣಗೆರೆ: ಪೊಲೀಸ್ ವಶದಲ್ಲಿದ್ದಾಗಲೇ ಮೃತಪಟ್ಟ ಮರಳಸಿದ್ದಪ್ಪ ಕುಟುಂಬಕ್ಕೆ 5 ಎಕರೆ ಸರ್ಕಾರಿ ಜಮೀನು ಹಾಗೂ ಸರ್ಕಾರಿ ನೌಕರಿ ನೀಡಬೇಕೆಂದು ಆಗ್ರಹಿಸಿ ಮಾಯಕೊಂಡ ಪಟ್ಟಣದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪೊಲೀಸ್ ಕಸ್ಟೋಡಿಯಲ್ ಡೆತ್ ಖಂಡಿಸಿ ದಾವಣಗೆರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಪೊಲೀಸ್ ಕಸ್ಟೋಡಿಯಲ್ ಡೆತ್ ಆದ ಮರಳಸಿದ್ದಪ್ಪ ಹಿಂದುಳಿದ ವರ್ಗದವರಾಗಿದ್ದು, ಸಚಿವ ಗೋವಿಂದ ಕಾರಜೋಳ ನ್ಯಾಯ ಕೊಡಿಸಬೇಕು. ಸಿಐಡಿ ಪೊಲೀಸರು ನಡೆಸುತ್ತಿರುವ ತನಿಖೆ ಪಾರದರ್ಶಕವಾಗಿರಬೇಕು ಎಂದು ಒತ್ತಾಯಿಸಲಾಯಿತು.
ಆನಗೋಡು ಜಿಲ್ಲಾ ಪಂಚಾಯಿತಿ ಹಾಗೂ ಕಾಂಗ್ರೆಸ್ ಮುಖಂಡ ಕೆ. ಎಸ್. ಬಸವಂತಪ್ಪ ನೇತೃತ್ವದಲ್ಲಿ ಪಟ್ಟಣದ ಗಣಪತಿ ದೇವಸ್ಥಾನದಿಂದ ಹೊರಟು ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ತಹಶೀಲ್ದಾರ್ ಅವರ ಮೂಲಕ ರಾಜ್ಯಪಾಲರು ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಪೊಲೀಸ್ ಕಸ್ಟೋಡಿಯಲ್ ಡೆತ್ ಆದ ಮರಳಸಿದ್ದಪ್ಪ ಹಿಂದುಳಿದ ವರ್ಗದವರಾಗಿದ್ದು, ಸಚಿವ ಗೋವಿಂದ ಕಾರಜೋಳ ನ್ಯಾಯ ಕೊಡಿಸಬೇಕು. ಸಿಐಡಿ ಪೊಲೀಸರು ನಡೆಸುತ್ತಿರುವ ತನಿಖೆ ಪಾರದರ್ಶಕವಾಗಿ ನಡೆಯಬೇಕು. ತಪ್ಪಿತಸ್ಥ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಶಿಕ್ಷೆ ವಿಧಿಸಬೇಕು. ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕು. ಈ ಪ್ರಕರಣ ಯಾವುದೇ ಕಾರಣಕ್ಕೆ ಹಳ್ಳ ಹಿಡಿಯಬಾರದು ಎಂದು ಒತ್ತಾಯಿಸಿದರು.