ದಾವಣಗೆರೆ: ವಿಧಾನಸಭಾ ಚುನಾವಣೆಗೆ ಇನ್ನೂ ಸಮಯ ಇರುವಾಗಲೇ ಕೈ ಪಾಳಯದಲ್ಲಿ ಟಿಕೆಟ್ಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಭರದಿಂದ ಸಾಗಿದೆ. ದಾವಣಗೆರೆ ದಕ್ಷಿಣ ಮತಕ್ಷೇತ್ರದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತೆ ಸ್ಪರ್ಧಿಸಲು ಉತ್ಸಾಹದಿಂದ ಅರ್ಜಿ ಸಲ್ಲಿಸಿದ್ದಾರೆ.
ಆದ್ರೆ, ದಾವಣಗೆರೆ ಉತ್ತರ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಇಲ್ಲಿಯತನಕ ಟಿಕೆಟ್ಗಾಗಿ ಅರ್ಜಿ ಸಲ್ಲಿಕೆ ಮಾಡಿಲ್ಲ ಎಂಬ ಸುದ್ದಿ ಕೈ ಪಾಳಯದಲ್ಲಿ ಕೇಳಿ ಬಂದಿದೆ.