ಕರ್ನಾಟಕ

karnataka

ETV Bharat / state

ಕೋರ್ ಕಮಿಟಿ, ರಾಜ್ಯ ಕಾರ್ಯಕಾರಿಣಿ ಸಭೆ: ದಾವಣಗೆರೆಗೆ ತೆರಳಲಿರುವ ಸಿಎಂ ಬೊಮ್ಮಾಯಿ - ದಾವಣಗೆರೆ ಲೇಟೆಸ್ಟ್ ನ್ಯೂಸ್

ದಾವಣಗೆರೆಯಲ್ಲಿ ಕೋರ್ ಕಮಿಟಿ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ.

ಬೊಮ್ಮಾಯಿ
ಬೊಮ್ಮಾಯಿ

By

Published : Sep 18, 2021, 11:22 AM IST

Updated : Sep 18, 2021, 11:55 AM IST

ಬೆಂಗಳೂರು/ದಾವಣಗೆರೆ: ಪಕ್ಷದ ಕೋರ್ ಕಮಿಟಿ ಸಭೆ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನಗಳ ಕಾಲ ದಾವಣಗೆರೆ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ಕೋರ್ ಕಮಿಟಿ ಮತ್ತು ಕಾರ್ಯಕಾರಿಣಿ ಸಭೆ ಇದಾಗಿದೆ.

ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಬೆಣ್ಣೆನಗರಿ

ಇಂದು ಮಧ್ಯಾಹ್ನ 2:00 ಗಂಟೆಗೆ ರಸ್ತೆ ಮಾರ್ಗದ ಮೂಲಕ ದಾವಣಗೆರೆ ಪ್ರವಾಸ ಕೈಗೊಳ್ಳಲಿರುವ ಬೊಮ್ಮಾಯಿ, ಸಂಜೆ 5.30 ಕ್ಕೆ ದಾವಣಗೆರೆಗೆ ತಲುಪಲಿದ್ದಾರೆ. ಸಂಜೆ 7 ಗಂಟೆಗೆ ನಗರದ ಹೊರವಲಯದಲ್ಲಿರುವ ಅಪೂರ್ವ ರೆಸಾರ್ಟ್​​ನಲ್ಲಿ ನಡೆಯಲಿರುವ ಕೋರ್​ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಭಾನುವಾರ ಬೆಳಗ್ಗೆ 9.30 ಕ್ಕೆ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ತ್ರಿಶೂಲ್ ಕಲಾಭವನದಲ್ಲಿ ನಡೆಯಲಿರುವ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 8 ಗಂಟೆಗೆ ದಾವಣಗೆರೆಯಿಂದ ಹೊರಡಲಿದ್ದು, ರಾತ್ರಿ 11.30ರ ಸುಮಾರಿಗೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಮಾಜಿ ಸಿಎಂ ಬಿಎಸ್​ವೈ ಕೂಡ ಭಾಗಿ

ಶಿವಮೊಗ್ಗ ಪ್ರವಾಸದಲ್ಲಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ 4.30 ಕ್ಕೆ ದಾವಣಗೆರೆಗೆ ತೆರಳಲಿದ್ದಾರೆ. ಸಂಜೆ 7 ಗಂಟೆಗೆ ನಡೆಯಲಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ರಾತ್ರಿ ಜಿಎಂಐಟಿ ಗೆಸ್ಟ್ ಹೌಸ್​​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿರುವ ಬಿಎಸ್​ವೈ ಮಧ್ಯಾಹ್ನ 12.30 ಕ್ಕೆ ಹೊರಟು ಸಂಜೆ 4 ಗಂಟೆಗೆ ಬೆಂಗಳೂರಿಗೆ ಬರಲಿದ್ದಾರೆ.

Last Updated : Sep 18, 2021, 11:55 AM IST

ABOUT THE AUTHOR

...view details