ದಾವಣಗೆರೆ: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿವೆ. ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್‌ಗೆ ಕೂಡ ಸೋಂಕು ತಗುಲಿರುವುದು ದೃಢಪಟ್ಟಿದೆ.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್‌ಗೆ ಕೊರೊನಾ ಸೋಂಕು - ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಕೋವಿಡ್ 19 ದೃಢ ನ್ಯೂಸ್
ಇಂದು ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಮತ್ತು ಅವರ ಪತ್ನಿ ಹಾಗೂ ಪುತ್ರನಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
Davanagere
ಇಂದು ಬೆಳಗ್ಗೆ ಸಿಜೆ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಮೇಯರ್ ಜೊತೆಗೆ ಅವರ ಪತ್ನಿ, ಪುತ್ರನಿಗೂ ಸೋಂಕಿರುವುದು ದೃಢಪಟ್ಟಿದೆ. ಆದರೆ, ಪುತ್ರಿಯ ವರದಿ ನೆಗೆಟಿವ್ ಬಂದಿದೆ.
ಇನ್ನು, ಮೇಯರ್ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಶೋಧ ಕಾರ್ಯ ನಡೆಸಲಾಗುತ್ತಿದೆ. ಜೊತೆಗೆ ಮೇಯರ್ ಸೇರಿ ಅವರ ಕುಟುಂಬಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
TAGGED:
Mayor corona confirm news