ಕರ್ನಾಟಕ

karnataka

ಆಶಾ ಕಾರ್ಯಕರ್ತೆಯರಿಗೆ ತೊಂದರೆ ನೀಡಿದರೆ ಪ್ರಕರಣ ದಾಖಲಿಸಿ: ಈಶ್ವರಪ್ಪ ಸೂಚನೆ

By

Published : Apr 4, 2020, 3:27 PM IST

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿ ಸಂಗ್ರಹಿಸುವ ವೇಳೆ ಯಾರಾದರೂ ತೊಂದರೆ ನೀಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.‌ಈಶ್ವರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

corona awareness meeting in davanagere
ಆಶಾ ಕಾರ್ಯಕರ್ತೆಯರಿಗೆ ತೊಂದರೆ ನೀಡಿದರೆ ಪ್ರಕರಣ ದಾಖಲಿಸಿ: ಈಶ್ವರಪ್ಪ ಸೂಚನೆ

ದಾವಣಗೆರೆ: ಹಳ್ಳಿ ಹಳ್ಳಿಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿ ಸಂಗ್ರಹಿಸಲು ತೆರಳುತ್ತಿದ್ದು, ಯಾರಾದರೂ ತೊಂದರೆ ನೀಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.‌ಈಶ್ವರಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಾಯಕೊಂಡ ಸಮುದಾಯ ಭವನದಲ್ಲಿ‌ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು‌ ಏರ್ಪಡಿಸಿದ್ದ ಸಭೆಯಲ್ಲಿ‌ ಮಾತನಾಡಿದ ಅವರು, ಕೊರೊನಾ ತಡೆಗೆ ಶ್ರಮಿಸುತ್ತಿರುವವರ ಜೊತೆ ನಾವಿದ್ದೇವೆ ಎಂಬ ಸಂದೇಶ ರವಾನೆಯಾಗಬೇಕು. ಅವರಿಗೆ ತೊಂದರೆ ನೀಡುವವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಹೇಳಿದರು.

ಔಷಧಿ ಮತ್ತು ತರಕಾರಿ ಖರೀದಿಗೆ ಬರುವ ಜನರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಮಸೀದಿ, ಚರ್ಚ್ ಹಾಗೂ ದೇವಸ್ಥಾನಗಳಲ್ಲಿ ಸಾಮೂಹಿಕ ಪ್ರಾಥನೆಗೆ ಅವಕಾಶವಿಲ್ಲ ಎಂದು ಆದೇಶಿಸಲಾಗಿದೆ. ಇದು ಕಟ್ಟುನಿಟ್ಟಾಗಿ ಜಾರಿಯಾಗಬೇಕು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಜನತೆಯು ಭಾನುವಾರ ರಾತ್ರಿ 9 ಗಂಟೆಯಿಂದ 9 ನಿಮಿಷ ಪ್ರಾರ್ಥನೆ ಮಾಡಿ ಮೇಣದ ಬತ್ತಿಯನ್ನು ಹಚ್ಚಿ ಕೊರೊನಾ ವಿರುದ್ದ ಹೊರಾಡುತ್ತಿರುವ ಎಲ್ಲಾ ವೈದ್ಯರು, ಅಧಿಕಾರಿಗಳು, ಸಿಬ್ಬಂದಿಗೆ ಸಮರ್ಪಿಸಲು ಕರೆ ನೀಡಿದ್ದಾರೆ. ನಾವೆಲ್ಲ ಒಂದೇ, ನಾವೆಲ್ಲರೂ ಭಾರತೀಯರು ಎಂಬ ಭಾವನೆಯಿಂದ ಈ ಲಾಕ್‍ಡೌನ್‍ ಅನ್ನು ಯಶಸ್ವಿ ಮಾಡೋಣ ಎಂದು ಜನರಲ್ಲಿ ಮನವಿ ಮಾಡಿದರು.

ದಾವಣಗೆರೆ ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ಜಿಲ್ಲಾಡಳಿತ ಹಾಗೂ ಕೆಲವು ಇಲಾಖೆಗಳ ಸಹಕಾರದೊಂದಿಗೆ ದಾವಣಗೆರೆಯಲ್ಲಿ ಒಟ್ಟು 4 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದ್ದೇವೆ. ಹೋಬಳಿ ಮತ್ತು ಗ್ರಾಮಗಳಿಗೆ ಗಾಡಿಗಳ ಮೂಲಕ ತರಕಾರಿ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿದ್ದೇವೆ. ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಜನರಿಗೆ ಅನೂಕೂಲವಾಗುವಂತೆ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಹಣ್ಣು ತರಕಾರಿಗಳನ್ನು ಖರೀದಿಸಲು ಅವಕಾಶ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಜನರು ಖರೀದಿಸಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details