ದಾವಣಗೆರೆ: ಜಿಲ್ಲೆಯಲ್ಲಿ ಇಂದು 8 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು,7 ಜನ ಸೋಂಕಿತರು ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದಾವಣಗೆರೆಯಲ್ಲಿ ಮತ್ತೆ 8 ಮಂದಿಗೆ ಕೊರೊನಾ: ಸೋಂಕಿತರ ಸಂಖ್ಯೆ 211 ಕ್ಕೆ - ರಾಜ್ಯದಲ್ಲಿ ಕೊರೊನಾ ಪ್ರಕರಣಗಳು
ದಾವಣಗೆರೆಯಲ್ಲಿ ಮತ್ತೆ 8 ಮಂದಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ. ಇದರಿಂದ ಸೋಂಕಿತರ ಸಂಖ್ಯೆ 211 ಕ್ಕೆ ಏರಿಕೆಯಾಗಿದೆ.
ದಾವಣಗೆರೆಯಲ್ಲಿ ಮತ್ತೆ 8 ಮಂದಿಗೆ ಕೊರೊನಾ
ಮೂವರು ಪುರುಷರು, ಐವರು ಮಹಿಳೆಯರಿಗೆ ಸೋಂಕು ವಕ್ಕರಿಸಿದೆ. ಇದುವರೆಗೆ ಒಟ್ಟು 211 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 157 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್ಗೆ ಒಟ್ಟು 6 ಮಂದಿ ಮೃತಪಟ್ಟಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 48 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
7 ಜನರ ಬಿಡುಗಡೆ ರೋಗಿ ಸಂಖ್ಯೆ 3635, 3636, 3637, 3639, 3657, 3862 ಮತ್ತು 1485 ಸಂಖ್ಯೆಯ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.