ದಾವಣಗೆರೆ:ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಇದೇ ಮೊದಲ ಬಾರಿಗೆ ಒಂದೇ ದಿನ 327 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಐದು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಸೋಂಕಿನಿಂದ ಐವರು ಬಲಿಯಾಗಿದ್ದು, ಸಾವಿನ ಸಂಖ್ಯೆ 126 ಕ್ಕೇರಿದೆ.
ಹೈಪರ್ ಟೆನ್ಶನ್ನಿಂದ ಬಳಲುತ್ತಿದ್ದ ನಾಲ್ವರು ಹಾಗೂ ಡಯಾಬಿಟಿಸ್ ಸೇರಿದಂತೆ ಇತರೆ ರೋಗಗಳಿಂದ ಬಳಲುತ್ತಿದ್ದ ಒಬ್ಬರು ಸಾವನ್ನಪ್ಪಿದ್ದಾರೆ. ದಾವಣಗೆರೆಯ ಮೂವರು, ಹಾವೇರಿಯ ರಟ್ಟೆಹಳ್ಳಿ ಗ್ರಾಮದ ಒಬ್ಬರು ಹಾಗೂ ಹರಿಹರ ತಾಲೂಕಿನ ಹರ್ಲಾಪುರ ಗ್ರಾಮದ ಒಬ್ಬರು ಸೋಂಕಿಗೆ ತುತ್ತಾಗಿದ್ದಾರೆ.