ಕರ್ನಾಟಕ

karnataka

ETV Bharat / state

ಸೋಂಕುಗಳ ಮೂಲ ಪತ್ತೆ ಪ್ರಗತಿಯಲ್ಲಿ: ಡಿಸಿ ಬೀಳಗಿ ಸ್ಟಷ್ಟನೆ

ದಾವಣಗೆರೆ ಭಾಷಾ ನಗರ ಹಾಗೂ ಜಾಲಿನಗರಗಳಲ್ಲಿ ಕಂಟೇನ್ಮೆಂಟ್​​ ಝೋನ್​ ಸ್ಥಾಪಿಸಲಾಗಿದೆ. ರೋಗಿ ಪಿ-533 ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

Corona infection detection is in progress
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

By

Published : Apr 30, 2020, 11:59 PM IST

ದಾವಣಗೆರೆ: ಭಾಷಾ ನಗರ ಹಾಗೂ ಜಾಲಿನಗರದಲ್ಲಿ ತಲಾ ಒಂದೊಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿತರ ಮೂಲವನ್ನು ಸಿಡಿಆರ್ ವರದಿಯ ಮೂಲಕ ಪತ್ತೆ ಹಚ್ಚುವ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್​.ಬೀಳಗಿ ತಿಳಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ರೋಗಿ ಸಂಖ್ಯೆ 533ಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 26 ಹಾಗೂ ಎರಡನೇ ಸಂಪರ್ಕದಲ್ಲಿದ್ದ 49 ಜನರನ್ನು ಪತ್ತೆ ಹಚ್ಚಲಾಗಿದೆ. ಈ 75 ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದರು.

ಇವರನ್ನು ಇನ್ಸಿಟ್ಯೂಷನ್ ಕ್ವಾರಂಟೈನ್ ಮಾಡಿ, ಕ್ರಮ ಕೈಗೊಳ್ಳಲಾಗಿದೆ. ಈ ರೋಗಿ ಸಂಬಂಧಿಸಿದಂತೆ ಪ್ರಾಥಮಿಕ ಸಂಪರ್ಕ ಹೊಂದಿರುವವರು 10 ಹಾಗೂ ಸೆಕೆಂಡರಿ ಸಂಪರ್ಕದಲ್ಲಿರುವವರು 12 ಜನರನ್ನು ಪತ್ತೆ ಹಚ್ಚಿದ್ದು, ಇವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಇವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದರು.

ಈ ರೋಗಿಗೆ ಸಂಬಂಧಿಸಿದ ಕಾಂಟಾಕ್ಟ್ ಟ್ರೇಸಿಂಗ್ ಇನ್ನೂ ಪ್ರಗತಿಯಲ್ಲಿದೆ. ಈ ಎರಡು ಪ್ರದೇಶಗಳನ್ನು ಕಂಟೇನ್ಮೆಂಟ್​​ ಝೋನ್ ಸ್ಥಾಪಿಸಿ, ಸರ್ವೇಕ್ಷಣಾ ಕ್ರಮಗಳನ್ನು ಸಹ ಕೈಗೊಂಡು ಸರ್ವೇ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details