ದಾವಣಗೆರೆ: ದೆಹಲಿಯಿಂದ ಚನ್ನಗಿರಿಗೆ 11 ಮಂದಿ ಬಂದಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಇವರೆಲ್ಲರನ್ನೂ ಕ್ವಾರಂಟೈನ್ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಸ್ಪಷ್ಟನೆ ನೀಡಿದ್ದಾರೆ.
ದೆಹಲಿಯಿಂದ ಬಂದ 11 ಮಂದಿಗೆ ಕ್ವಾರಂಟೈನ್: ದಾವಣಗೆರೆ ಡಿಸಿ
ದೆಹಲಿಯಿಂದ ದಾವಣಗೆರೆ ಜಿಲ್ಲೆಗೆ ಆಗಮಿಸಿದ್ದ 11 ಮಂದಿಯನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, ಎಲ್ಲರ ಮೇಲೂ ತೀವ್ರ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದ್ದಾರೆ. ದೆಹಲಿಗೆ ತೆರಳಿದ್ದ 12 ಮಂದಿ ಪೈಕಿ ಓರ್ವ ಮುಜಾಫರ್ಬಾದ್ನಲ್ಲಿದ್ದು, ಅಲ್ಲೇ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಉಳಿದ 11 ಮಂದಿ ಚನ್ನಗಿರಿಯಲ್ಲಿ ಪತ್ತೆಯಾಗಿದ್ದಾರೆ.
ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಚನ್ನಗಿರಿ ಡಿವೈಎಸ್ಪಿ ನೇತೃತ್ವದ ತಂಡ 11 ಮಂದಿಯನ್ನು ಪತ್ತೆ ಹಚ್ಚಿ ಕರೆದುಕೊಂಡು ಬಂದಿದೆ. ಅವರಿಗೆಲ್ಲ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ದೆಹಲಿಗೆ ತೆರಳಿದ್ದ 12 ಮಂದಿ ಪೈಕಿ ಓರ್ವ ಮುಜಾಫರ್ಬಾದ್ನಲ್ಲಿದ್ದು, ಅಲ್ಲೇ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಉಳಿದ 11 ಮಂದಿ ಚನ್ನಗಿರಿಯಲ್ಲಿ ಪತ್ತೆಯಾಗಿದ್ದಾರೆ. ಇವರನ್ನೆಲ್ಲಾ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಫೆಬ್ರವರಿ 28ರಂದು ಇವರೆಲ್ಲಾ ಚನ್ನಗಿರಿಗೆ ವಾಪಸ್ ಬಂದಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಹೇಳಿದರು.