ದಾವಣಗೆರೆ:ಇಂದು ಮತ್ತೆ 3 ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಸಂಚಾರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಪೇದೆ ಹಾಗೂ ಬೆಳ್ಳುಳ್ಳಿ ವ್ಯಾಪಾರಿಗೂ ಹೆಮ್ಮಾರಿ ವಕ್ಕರಿಸಿದೆ.
ಕಂಟೈನ್ಮೆಂಟ್ ಝೋನ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಗೆ ಕೊರೊನಾ ಸೋಂಕು ತಗುಲಿದ್ದು, ಈಗ ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ಪೇದೆ ಕೆಲಸ ಮಾಡುತ್ತಿದ್ದ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.