ದಾವಣಗೆರೆ: ಜಿಲ್ಲೆಯಲ್ಲಿ ಮೂವರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅಲ್ಲದೆ ದಾವಣಗೆರೆ ತಾಲೂಕಿನ ವಸತಿ ಶಾಲೆಯ ವಿದ್ಯಾರ್ಥಿನಿಯೋರ್ವಳಿಗೆ ಸೋಂಕು ದೃಢಪಟ್ಟಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ತರಗತಿಗಳು ಪ್ರಾರಂಭವಾದ ಹಿನ್ನೆಲೆ ಶಿಕ್ಷಕರಿಗೆ ಕೋವಿಡ್ ಟೆಸ್ಟ್ ಮಾಡಿಸಲು ಸೂಚಿಸಲಾಗಿತ್ತು. ಆದ್ದರಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷಾ ವರದಿ ಬಂದ ಬಳಿಕ ವಿದ್ಯಾರ್ಥಿನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.