ದಾವಣಗೆರೆ:ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ.
ದಾವಣಗೆರೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್..8 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ದಾವಣಗೆರೆ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 8 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದಾವಣಗೆರೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್..8 ಮಂದಿ ಆಸ್ಪತ್ರೆಯಿಂದ ಡಿಶ್ಚಾರ್ಜ್
ರಾಜಸ್ಥಾನದಿಂದ ಮರಳಿದ್ದ 25 ವರ್ಷದ ಯುವತಿ, ಐಎಲ್ಐನಿಂದ ಬಳಲುತ್ತಿದ್ದ 32 ವರ್ಷದ ಮಹಿಳೆ ಹಾಗೂ 30 ವರ್ಷದ ಪುರುಷನಿಗೆ ಕೊರೊನಾ ದೃಢಪಟ್ಟಿದೆ. ಇಂದು 8 ಮಂದಿ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.
ಇದುವರೆಗೆ ಒಟ್ಟು 12,895 ಗಂಟಲು ದ್ರವದ ಮಾದರಿಗಳನ್ನ ಸಂಗ್ರಹಿಸಲಾಗಿದ್ದು, ಅದರಲ್ಲಿ 12,134 ಜನರ ವರದಿ ನೆಗೆಟಿವ್ ಬಂದಿವೆ. ಇನ್ನೂ 528 ಜನರ ವರದಿ ಬರಬೇಕಿದೆ.