ದಾವಣಗೆರೆ: ಕೊರೊನಾ ವೈರಸ್‍ನಿಂದಾಗಿ ಸಂಭವಿಸಬಹುದಾದ ಅನಾಹುತ ತಡೆಗಟ್ಟಲು ಕೆಲ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 14ರಿಂದ 24ರವರೆಗೆ ಜಿಲ್ಲೆಯಾದ್ಯಂತ ಸಿಆರ್‌ಪಿಸಿ ಸೆಕ್ಷನ್ 144 ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಸೋಂಕು ಒಬ್ಬರಿಂದೊಬ್ಬರಿಗೆ ಹರಡುವಂತಹ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸಭೆ, ಸಮಾರಂಭ, ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದ್ದಾರೆ.