ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಒಂದೇ ದಿನ 110 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,533ಕ್ಕೆ ಏರಿಕೆಯಾಗಿದ್ದು, ಇಂದು ಒರ್ವ ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 37 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಬೆಣ್ಣೆನಗರಿಯಲ್ಲಿ ಕೊರೊನಾರ್ಭಟ : ಇಂದು 110 ಮಂದಿಗೆ ಸೋಂಕು - ದಾವಣಗೆರೆಯಲ್ಲಿ ಇಂದು ಕೊರೊನಾ ಕೇಸಸ್
ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಉಲ್ಬಣಿಸುತ್ತಿದ್ದು, ಇಂದು ಒಂದೇ ದಿನ 110 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,533ಕ್ಕೆ ಏರಿದೆ.
ಬೆಣ್ಣೆನಗರಿಯಲ್ಲಿ ಕೊರೊನಾ ಆರ್ಭಟ
65 ವರ್ಷದ ವೃದ್ಧ ತೀವ್ರ ಉಸಿರಾಟ, ಕಫ, ಜ್ವರದಿಂದ ಬಳಲುತ್ತಿದ್ದು, ಕಳೆದ ಜುಲೈ 17 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ನಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
60 ಜನರು ಇಂದು ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದುವರೆಗೆ ಒಟ್ಟು 927 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ 569 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.