ಕರ್ನಾಟಕ

karnataka

ETV Bharat / state

ದೇವರ ದರ್ಶನಕ್ಕೆ ಹೊರಟ ಸತಿಪತಿ ದೇವರ ಪಾದ ಸೇರಿದರು.. ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಪ್ರಾಣಬಿಟ್ಟ ದಂಪತಿ - news kannada

ಉಕ್ಕಡಗಾತ್ರಿಗೆ ತೆರಳುತ್ತಿದ್ದ ದಂಪತಿಯ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​​​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು

By

Published : May 4, 2019, 11:43 AM IST

ದಾವಣಗೆರೆ: ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸ ಕುಂದುವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಡಿಕ್ಕಿ ರಭಸಕ್ಕೆ ನಜ್ಜುಗುಜ್ಜಾದ ಕಾರು

ಮೃತ ದಂಪತಿ ಇಂದು ಅಮವಾಸ್ಯೆ ಕಾರಣ ಶ್ರೀಕ್ಷೇತ್ರ ಉಕ್ಕಡಗಾತ್ರಿಗೆ ಪೂಜೆಗೆಂದು ತೆರಳುತ್ತಿದ್ದರು. ಈ ವೇಳೆ ನಗರದ ಹೊಸ ಕುಂದುವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಿವೈಡರ್​​​ಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ.

ಡಿಕ್ಕಿ ರಭಸಕ್ಕೆ ಚೆಲ್ಲಾಪಿಲ್ಲಿಯಾದ ವಾಹನದ ಬಿಡಿಭಾಗಗಳು

ಬೆಂಗಳೂರಿನ ಶಿವಪ್ರಕಾಶ್(43), ಉಮಾ(40) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಂದುವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ದೃಶ್ಯ

ಅಮವಾಸ್ಯೆ ಬಂದರೆ ಸಾಕು ಹರಿಹರ ತಾಲೂಕಿನ ಉಕ್ಕಡಗಾತ್ರಿಗೆ ತೆರಳಿ ಪೂಜೆ ಸಲ್ಲಿಸುವುದು ಸಾಮಾನ್ಯ. ಅದರಂತೆ ದಂಪತಿ ಉಕ್ಕಡಗಾತ್ರಿಗೆ ತೆರಳುತ್ತಿದ್ದಾಗ ಬೆಳಗಿನ ಜಾವ 5 ಗಂಟೆಗೆ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಮೃತ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು‌ಮುಟ್ಟಿದೆ. ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details