ಕರ್ನಾಟಕ

karnataka

ETV Bharat / state

ಹರಿಹರ ಬಳಿ ಪಿಕಪ್ ಡ್ಯಾಂಗೆ ಹಾರಿ ದಂಪತಿ ಆತ್ಮಹತ್ಯೆ - couple suicide at davanagere

ಜೀವನದಲ್ಲಿ ಜಿಗುಪ್ಸೆಗೊಂಡ ದಂಪತಿಯು ದೇವರಬೆಳಕೆರೆ ಪಿಕಪ್ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

couple-suicide-by-jumping-into-dam-at-davanagere
ಜೀವನದಲ್ಲಿ ಜಿಗುಪ್ಸೆಗೊಂಡ ದಂಪತಿ, ದೇವರಬೆಳಕೆರೆ ಪಿಕಪ್ ಡ್ಯಾಂಗೆ ಹಾರಿ ಆತ್ಮಹತ್ಯೆ

By

Published : May 26, 2022, 1:02 PM IST

ದಾವಣಗೆರೆ: ಜೀವನದಲ್ಲಿ ಜಿಗುಪ್ಸೆಗೊಂಡ ದಂಪತಿಯು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ದೇವರಬೆಳಕೆರೆ ಪಿಕಪ್ ಡ್ಯಾಂ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಜಿಲ್ಲೆಯ ಹರಿಹರ ತಾಲೂಕಿನ ಸಂಕ್ಲಿಪುರದ ನಿವಾಸಿಗಳಾದ ಮಠದ ಚೆನ್ನಪ್ಪಸ್ವಾಮಿ(45), ವನಜಾಕ್ಷಮ್ಮ(37) ಎಂದು ಗುರುತಿಸಲಾಗಿದೆ.

ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ದೇವರಬೆಳಕೆರೆ ಪಿಕಪ್ ಡ್ಯಾಂ ಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗ್ತಿದೆ. ಪಿಕಪ್ ಡ್ಯಾಂ ನಲ್ಲಿ ಚೆನ್ನಪ್ಪಸ್ವಾಮಿ ದಂಪತಿಯ ಮೃತದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯರು, ಬಳಿಕ ಇಬ್ಬರ ಮೃತದೇಹವನ್ನು ಪತ್ತೆ ಮಾಡಿ ಹೊರತೆಗೆದಿದ್ದಾರೆ. ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ.

ಪ್ರಕರಣ ಸಂಬಂಧ ಹರಿಹರ ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ :ಭೂಕಬಳಿಕೆಗೆ ನಕಲಿ ದಾಖಲೆ ಸೃಷ್ಟಿ ಆರೋಪ: 17 ಜನರ ವಿರುದ್ಧ 4 ಪ್ರತ್ಯೇಕ ಪ್ರಕರಣ ದಾಖಲು

For All Latest Updates

ABOUT THE AUTHOR

...view details