ಕರ್ನಾಟಕ

karnataka

ETV Bharat / state

ಕಷ್ಟಪಟ್ಟು ಕೆಲಸ ನಿರ್ವಹಿಸುವುದಕ್ಕಿಂತ ಸ್ಮಾರ್ಟ್ ವರ್ಕ್ ಮಾಡಿ; ಅಧಿಕಾರಿಗಳಿಗೆ ಉಮಾಶಂಕರ್ ಸೂಚನೆ - ದಾವಣಗೆರೆ ಕೋವಿಡ್​-19 ಪ್ರಗತಿ ಪರಿಶೀಲನಾ ಸಭೆ

ದಾವಣಗೆರೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್ ಅಧ್ಯಕ್ಷತೆಯಲ್ಲಿ ಕೋವಿಡ್​-19 ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

Meeting
Meeting

By

Published : Jun 16, 2020, 1:59 PM IST

ದಾವಣಗೆರೆ:ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, ಜಾಗರೂಕತೆಯಿಂದ ಎಲ್ಲಾ ಅಧಿಕಾರಿಗಳು ಕೆಲಸ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಅಪಾಯದಿಂದ ತಪ್ಪಿಸಿಕೊಳ್ಳಬಹುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಯೋಜಿಸಲಾಗಿದ್ದ ಕೋವಿಡ್-19 ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೇಸ್‍ಗಳು ಕಡಿಮೆಯಾಗುವಂತೆ ನೋಡಿಕೊಳ್ಳಿ. ಕಂಟೈನ್​ಮೆಂಟ್ ಝೋನ್ ಸೇರಿದಂತೆ ಬಫರ್ ಜೋನ್‍ಗಳಲ್ಲಿ ಕೊರೊನಾ ರೋಗ ಲಕ್ಷಣಗಳನ್ನು ಹೊಂದಿರುವವರನ್ನು ಪತ್ತೆ ಮಾಡಿ ಟೆಸ್ಟ್​ಗೆ ಒಳಪಡಿಸಿ ಎಂದು ಸೂಚಿಸಿದರು.

ಕಂಟೈನ್​ಮೆಂಟ್​ ಝೋನ್‍ಗಳಲ್ಲಿ ಕಮ್ಯುನಿಟಿ ಸ್ಪ್ರೆಡ್​ ಆಗುವಂತಹ ಸಾಧ್ಯತೆ ಹೆಚ್ಚಿದ್ದು, ಅದನ್ನು ತಡೆಯುವಲ್ಲಿ ಹೆಚ್ಚಿನ ಗಮಸಹರಿಸಬೇಕು. ಜೊತೆಗೆ ಬಫರ್ ಝೋನ್‍ಗಳಲ್ಲಿ ಪ್ರತಿದಿನವು ಟೆಸ್ಟಿಂಗ್ ನಡೆಸಬೇಕು. ಜಿಲ್ಲೆಯ ಸೋಂಕಿತರಲ್ಲಿ ವೃದ್ದರು ಹೆಚ್ಚಿದ್ದು, ಇದು ಸಹ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಇಲ್ಲಿಯವರೆಗೂ ದಾಖಲಾದ 227 ಕೇಸ್‍ಗಳಲ್ಲಿ 60ಕ್ಕಿಂತ ಮೇಲ್ಪಟ್ಟ ವಯಸ್ಸಿನವರ ಸಂಖ್ಯೆ ಹೆಚ್ಚಾಗಿ ದಾಖಲಾಗಿದೆ. ಜಿಲ್ಲೆಯಲ್ಲಿ ರೋಗಲಕ್ಷಣಗಳು ಇರುವ ಹಾಗೂ ಇಲ್ಲದಿರುವ ಸೋಂಕಿತರ ಸಂಖ್ಯೆಗಳು ಸಹ ಹೆಚ್ಚಾಗಿ ದಾಖಲಾಗಿವೆ ಎಂದರು.

ಅಲ್ಲದೇ ಕೊರೊನಾ ಸೋಂಕು ಲಕ್ಷಣಗಳಿರುವ ರೋಗಿಗಳನ್ನು ಚೆನ್ನಾಗಿ ಆರೈಕೆ ಮಾಡಿ, ಸರಿಯಾಗಿ ಉಪಚರಿಸಿ. ಜಾಲಿನಗರದಲ್ಲಿ ಸೋಂಕು ಪತ್ತೆಯಾಗಿರುವುದರ ಪ್ರಾಥಮಿಕ ಹಾಗೂ ಮೂಲ ಸಂಪರ್ಕ ಪತ್ತೆ ಹಚ್ಚಿ ಎಂದು ಸೂಚಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡದಂತೆ ಹೆಚ್ಚಿನ ಜಾಗೃತಿ ವಹಿಸಿ ಹಾಗೂ ತುಂಬಾ ಕಷ್ಟಪಟ್ಟು ಕೆಲಸ ನಿರ್ವಹಿಸುವುದಕ್ಕಿಂತ ಸ್ಮಾರ್ಟ್ ವರ್ಕ್ ಮಾಡಿ ಎಂದು ಸಲಹೆ ನೀಡಿದರು.

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವಂತಹ ಮಕ್ಕಳು ಕ್ವಾರಂಟೈನ್‍ನಲ್ಲಿದ್ದರೆ ಅಥವಾ ಕೋವಿಡ್ ಪಾಸಿಟಿವ್ ಎಂದು ದಾಖಲಾಗಿದ್ದರೆ ಹಾಗೂ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಬಂದಿರುವ ಮಕ್ಕಳಿಗೆ ಮುಂದಿನ ಪರೀಕ್ಷೆಯಲ್ಲಿ ಹೊಸ ವಿದ್ಯಾರ್ಥಿಯೆಂದು ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಇದನ್ನು ಮೊದಲ ಪ್ರಯತ್ನವೆಂದು ಪರಿಗಣಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಬೇಕು. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ರಾಘವನ್ ಮಾತನಾಡಿ, ಜಾಲಿನಗರದಲ್ಲಿ ಒಟ್ಟು 127 ರಲ್ಲಿ 97 ರೋಗಿಗಳು ಗುಣಮುಖರಾಗಿದ್ದು, ಇನ್ನು 9 ಕೇಸ್​ಗಳು ಮಾತ್ರ ಬಾಕಿ ಉಳಿದಿವೆ. ಜಿಲ್ಲೆಯಲ್ಲಿ ಕೋವಿಡ್ 19 ಲ್ಯಾಬ್ ಉದ್ಘಾಟನೆಯಾಗಿದೆ. ಒಟ್ಟು ಈವರೆಗೆ 12,116 ಮಂದಿಯನ್ನು ಟೆಸ್ಟ್ ಗೆ ಒಳಪಡಿಸಿದ್ದೇವೆ ಎಂದು ಮಾಹಿತಿ‌ ನೀಡಿದರು.

ತಲೆ ನೋವು, ಜ್ವರ ಮತ್ತು ಕೆಮ್ಮಿನ ಲಕ್ಷಣಗಳಿರುವವರು ಒಟ್ಟು 6,000 ಮಂದಿಯನ್ನು ಟೆಸ್ಟ್​ಗೆ ಒಳಪಡಿಸಿದ್ದೇವೆ. ಒಟ್ಟು ಈಗ 36 ಸಕ್ರಿಯ ಕೇಸ್‍ಗಳು ಇವೆ. ಅದರಲ್ಲಿ 90 ವರ್ಷದ ವೃದ್ದರೊಬ್ಬರಿಗೆ ಸೋಂಕು ತಗುಲಿದ್ದು, ಅವರನ್ನು ಎಚ್ಚರಿಕೆಯಿಂದ ನೋಡಿಕೊಳ್ಳಲಾಗುತ್ತದೆ ಎಂದರಲ್ಲದೇ, ಬಸವರಾಜ ಪೇಟೆಯ ಓರ್ವ ವ್ಯಕ್ತಿಗೆ ಕೊರೊನಾ ಸೋಂಕು ಕಂಡು ಬಂದಿದ್ದು, ಅವರ ಕುಟುಂಬದ 16 ಮಂದಿ ಕ್ವಾರಂಟೈನ್‍ಗೆ ಒಳಪಡಿಸಿದ್ದು, ಯಾರಿಗೂ ಸಹ ಸೋಂಕು ಕಂಡು ಬಂದಿಲ್ಲ ಎಂದು ಮಾಹಿತಿ ನೀಡಿದರು.

ABOUT THE AUTHOR

...view details