ಕರ್ನಾಟಕ

karnataka

ETV Bharat / state

ಕ್ರಿಸ್‍ಮಸ್ & ಹೊಸ ವರ್ಷ ಸಂಭ್ರಮಾಚರಣೆಗೆ ಮಾರ್ಗಸೂಚಿ - Davangere

ಕೋವಿಡ್​ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್‍ಮಸ್ ಹಬ್ಬ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವ ಅವಶ್ಯಕತೆ ಇದೆ ಎಂದು ಡಿಸಿ ಮಹಾಂತೇಶ್ ಆರ್. ಬೀಳಗಿ ಹೇಳಿದ್ದಾರೆ.

Davangere
ಡಿಸಿ ಮಹಾಂತೇಶ್ ಆರ್. ಬೀಳಗಿ

By

Published : Dec 19, 2020, 7:13 PM IST

ದಾವಣಗೆರೆ: ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸುವ ಸಲುವಾಗಿ ಕೇಂದ್ರೀಯ ಗೃಹ ಮಂತ್ರಾಲಯದ ಆದೇಶದಂತೆ ಕೋವಿಡ್-19 ನಿಗಾವಣೆ, ನಿಯಂತ್ರಣ ಮತ್ತು ಜಾಗ್ರತೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಇದನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದ್ದಾರೆ.

ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್‍ಮಸ್ ಹಬ್ಬ ಹಾಗೂ ಹೊಸ ವರ್ಷದ ಸಂಭ್ರಮಾಚರಣೆ ಸರಳವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವ ಅವಶ್ಯಕತೆ ಇದೆ. ಈ ಸಂದರ್ಭದಲ್ಲಿ ಜಿಲ್ಲಾದ್ಯಂತ ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಜನರು ಸೇರುವ ಸಾಮೂಹಿಕ ಪಾರ್ಟಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ, ಜನ ಸೇರತಕ್ಕಂತ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸುವುದನ್ನು ನಿಷೇಧಿಸಲಾಗಿದೆ.

ಅಲ್ಲದೇ ಆಚರಣೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಮತ್ತು ಕೋವಿಡ್-19ರ ನಿಗಾವಣೆ, ನಿಯಂತ್ರಣ ಮತ್ತು ಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಿಸಿದ ಜಿಲ್ಲಾಮಟ್ಟದ, ತಾಲೂಕುಮಟ್ಟದ ಪ್ರಾಧಿಕಾರಿಗಳು ಹಾಗೂ ಪೊಲೀಸರ ಜವಾಬ್ದಾರಿ. ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಎಲ್ಲಾ ಇಲಾಖಾ ಮುಖ್ಯಸ್ಥರು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಡಿಸಿ ಮಹಾಂತೇಶ್ ತಿಳಿಸಿದ್ದಾರೆ.

ಮಾರ್ಗಸೂಚಿಗಳು:

  • ಚರ್ಚ್​​​​​ಗಳಲ್ಲಿ ಒಮ್ಮೆಲೇ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು/ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು.
  • ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕ ಹಸ್ತಲಾಘವ ಮತ್ತು ಆಲಿಂಗನಕ್ಕೆ ನಿಷೇಧ.
  • ಡಿ. 30ರಿಂದ 2021ರ ಜನವರಿವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್​​ಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿ.ಜೆ. ಡ್ಯಾನ್ಸ್ ಕಾರ್ಯಕ್ರಮಗಳು, ವಿಶೇಷ ಪಾರ್ಟಿ ನಿಷೇಧ. ಪ್ರತಿನಿತ್ಯದಂತೆ ತೆರೆಯಲು ನಿರ್ಬಂಧವಿಲ್ಲ.
  • ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳು ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆ ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ, ಈ ಸ್ಥಳಗಳಲ್ಲಿ ಪ್ರತಿನಿತ್ಯ ಸಾಮಾನ್ಯ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ. ಆಯ್ದ ರಸ್ತೆ ಸ್ಥಳಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು.
  • 65 ವರ್ಷ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು.
  • ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್‍ಗಳು, ಮಾಲ್‍ಗಳು, ಪಬ್, ರೆಸ್ಟೋರೆಂಟ್‍ಗಳು ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details