ದಾವಣಗೆರೆ: ಕೊರೊನಾ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾದ ಕಾರಣ ಹೆದರಿ ವ್ಯಕ್ತಿಯೋರ್ವ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿಯಲ್ಲಿ ನಡೆದಿದೆ.
ಬಸವರಾಜ್ (30) ಆತ್ಮಹತ್ಯೆ ಮಾಡಿಕೊಂಡ ಸೋಂಕಿತ. ಎರಡು ದಿನಗಳ ಹಿಂದೆ ಬಸವರಾಜ್ ಅನಾರೋಗ್ಯದಿಂದ ಬಳಲುತ್ತಿದ್ದ. ಈ ಹಿನ್ನೆಲೆ ಕೋವಿಡ್ ಟೆಸ್ಟ್ ಮಾಡಿಸಿದಾಗ ಸೋಂಕು ಪತ್ತೆಯಾಗಿದೆ.