ದಾವಣಗೆರೆ:ಕೊರೊನಾ ನಿಯಮ ಉಲ್ಲಂಘಿಸಿದ ಶಾಸಕ ರೇಣುಕಾಚಾರ್ಯ ಅವರ ಮೇಲೆ ಪೊಲೀಸರಾಗಲಿ ಅಥವಾ ತಾಲೂಕು ಆಡಳಿತವಾಗಲಿ ಕ್ರಮ ಕೈಗೊಳ್ಳದೇ, ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದ ಆಯೋಜಕರ ವಿರುದ್ಧ ಮಾತ್ರ ಎಫ್ಐಆರ್ ದಾಖಲಿಸಿ ಹೊನ್ನಾಳಿ ಪೊಲೀಸರು ಕೈ ತೊಳೆದುಕೊಂಡಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಆಯೋಜನೆಗೊಂಡಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಶಾಸಕ ರೇಣುಕಾಚಾರ್ಯ ಪಾಲ್ಗೊಳ್ಳುವ ಮೂಲಕ ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದರು. ಶಾಸಕ ರೇಣುಕಾಚಾರ್ಯ ಅವರ ಮೇಲೆ ಪ್ರಕರಣ ದಾಖಲಿಸದೆ, ಕೇವಲ ಹೋರಿ ಬೆದರಿಸುವ ಸ್ಪರ್ಧೆ ಆಯೋಜಕರ ಮೇಲೆ ಹೊನ್ನಾಳಿ ಪೊಲೀಸರು ಕೇಸ್ ದಾಖಲಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.