ಕರ್ನಾಟಕ

karnataka

ETV Bharat / state

ಮೇ ವೇಳೆಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಲ್ಯಾಬ್: ಭೈರತಿ ಬಸವರಾಜ್ - Davangere District Hospital

ಕೋವಿಡ್​ -19 ಸ್ಯಾಂಪಲ್ಸ್ ಪರಿಕ್ಷಾ ಲ್ಯಾಬ್ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಮುಂದಿನ ತಿಂಗಳು ಲ್ಯಾಬ್ ಕಾರ್ಯಾಚರಣೆಗೆ ಸಿದ್ಧವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್
ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್

By

Published : Apr 28, 2020, 11:58 AM IST

ದಾವಣಗೆರೆ: ಜಿಲ್ಲಾಸ್ಪತ್ರೆಯಲ್ಲಿ 90 ಲಕ್ಷ ವೆಚ್ಚದಲ್ಲಿ ಕೋವಿಡ್ -19 ಪರೀಕ್ಷಾ ಲ್ಯಾಬ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಮೇ ತಿಂಗಳಲ್ಲಿ ಲ್ಯಾಬ್‍ ಸಿದ್ದವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.

ಜಗಳೂರು ಮತ್ತು ಹರಿಹರದಲ್ಲಿ ಕೋವಿಡ್ -19 ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆ ಮುಗಿಸಿದ ಬಳಿಕ ಜಿಲ್ಲಾಡಳಿತ ಭವನದಲ್ಲಿ ಮಾತನಾಡಿ, ಮಹಾನಗರಪಾಲಿಕೆ ವತಿಯಿಂದ ನಗರದ 26 ಸಾವಿರ ಬಡಕುಟುಂಬಗಳಿಗೆ ಸುಮಾರು 1 ಕೋಟಿ 10 ಲಕ್ಷ ರೂ. ಮೊತ್ತದ ಆಹಾರ ಕಿಟ್‍ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. 13 ಸಾವಿರ ಲೀಟರ್ ಹಾಲು ಈಗಾಗಲೇ ಪ್ರತಿ ದಿನ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್
ಜಿಲ್ಲೆಯಲ್ಲಿ ಈಗಾಗಲೇ ಪಡಿತರ ಚೀಟಿ ಹೊಂದಿದವರಿಗೆ ಪಡಿತರ ನೀಡಲಾಗಿದ್ದು, ಪಡಿತರ ಚೀಟಿ ಇಲ್ಲದ 8 ಸಾವಿರ ಕುಟುಂಬಗಳನ್ನು ಗುರುತಿಸಲಾಗಿದೆ. ಅವರಿಗೂ ಪಡಿತರ ನೀಡಲಾಗುತ್ತದೆ. ಜಿಲ್ಲೆಯಲ್ಲಿ 83 ಸಾವಿರ ಕಾರ್ಮಿಕರಿದ್ದು, ಈಗಾಗಲೇ 71 ಸಾವಿರ ಕಾರ್ಮಿಕರ ಖಾತೆಗೆ 2 ಸಾವಿರ ರೂ. ಜಮಾ ಮಾಡಲಾಗಿದೆ ಎಂದರು.

ABOUT THE AUTHOR

...view details