ದಾವಣಗೆರೆ:ಜಿಲ್ಲೆಯಲ್ಲಿ ಚಿಕ್ಕ ಪುಟ್ಟ ಜಮೀನುಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ರೈತಾಪಿ ವರ್ಗಕ್ಕೆ ಮಳೆ ಪೆಟ್ಟು ನೀಡಿದೆ. ವರುಣಾರ್ಭದಿಂದ ಸಾವಿರಾರು ಎಕರೆ ತೋಟಗಾರಿಕೆ ಬೆಳೆ ಹಾಗು ತರಕಾರಿ ಬೆಳೆ ನೆಲಕಚ್ಚಿದೆ. ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲೂಕುಗಳಲ್ಲಿ ಅತಿಹೆಚ್ಚು ಮಳೆ ಬಿದ್ದಿದ್ದು ಈ ಭಾಗದಲ್ಲಿ ರೈತರು ಬೆಳೆದಿದ್ದ ಬೀನ್ಸ್, ಟೊಮೆಟೊ, ಹೂಕೋಸು, ಸೇರಿದಂತೆ ಅನೇಕ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದೆ. ಹೊನ್ನಾಳಿಯ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಸರ್ಕಾರದಿಂದ ಪರಿಹಾರ ಕಲ್ಪಿಸುವುದಾಗಿ ತಿಳಿಸಿದರು.
ಮಳೆಯಿಂದ ಬೆಳೆ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿದ ಎಂ.ಪಿ.ರೇಣುಕಾಚಾರ್ಯ - crops damged due to heavy rain at davanagere
ಭಾರಿ ಮಳೆಯಿಂದ ಬೆಳೆ ಹಾನಿಯಾಗಿರುವ ಜಮೀನುಗಳಿಗೆ ಹೊನ್ನಾಳಿ ಶಾಸಕ ಭೇಟಿ ನೀಡಿ ಪರಿಶೀಲಿಸಿದರು.
ಎಂ.ಪಿ.ರೇಣುಕಾಚಾರ್ಯ