ದಾವಣಗೆರೆ:ಜಿಲ್ಲೆಯಲ್ಲಿ ಇಂದು 194 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 14,892ಕ್ಕೆ ಏರಿಕೆಯಾಗಿದೆ.
ದಾವಣಗೆರೆಯಲ್ಲಿ 194 ಕೊರೊನಾ ಪ್ರಕರಣಗಳು ಪತ್ತೆ: 133 ಮಂದಿ ಗುಣಮುಖ - 194 Corona cases found
ದಾವಣಗೆರೆಯಲ್ಲಿ ಇಂದು 194 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 133 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
![ದಾವಣಗೆರೆಯಲ್ಲಿ 194 ಕೊರೊನಾ ಪ್ರಕರಣಗಳು ಪತ್ತೆ: 133 ಮಂದಿ ಗುಣಮುಖ ದಾವಣಗೆರೆ ಜಿಲ್ಲಾಸ್ಪತ್ರೆ](https://etvbharatimages.akamaized.net/etvbharat/prod-images/768-512-8900424-351-8900424-1600792486926.jpg)
ದಾವಣಗೆರೆ ಜಿಲ್ಲಾಸ್ಪತ್ರೆ
ದಾವಣಗೆರೆಯಲ್ಲಿ 101, ಹರಿಹರ 19, ಜಗಳೂರು 12, ಚನ್ನಗಿರಿ 19, ಹೊನ್ನಾಳಿ 42 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ ಇಬ್ಬರಲ್ಲಿ ಸೋಂಕಿರುವುದು ಖಚಿತವಾಗಿದೆ.
133 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದುವರೆಗೆ 11,772 ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 2,886 ಸೋಂಕಿತರಿದ್ದು, ಚಿಕಿತ್ಸೆ ಮುಂದುವರೆದಿದೆ.