ಕರ್ನಾಟಕ

karnataka

ETV Bharat / state

ದಾವಣಗೆರೆ: 297 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ, ಮೂವರ ಸಾವು - 297 Corona positive case detected

ದಾವಣಗೆರೆ ಜಿಲ್ಲೆಯಲ್ಲಿಂದು 297 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 244 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ

By

Published : Sep 10, 2020, 11:46 PM IST

ದಾವಣಗೆರೆ: ಜಿಲ್ಲೆಯಲ್ಲಿ ಇಂದು 297 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,189ಕ್ಕೆ ಏರಿಕೆಯಾಗಿದೆ. ಮೂವರು ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದು, ಇದುವರೆಗೆ ಒಟ್ಟು 223 ಜನರು ಸಾವನ್ನಪ್ಪಿದ್ದಾರೆ‌.

ದಾವಣಗೆರೆಯಲ್ಲಿ 118, ಹರಿಹರ 60, ಜಗಳೂರು 13, ಚನ್ನಗಿರಿ 49, ಹೊನ್ನಾಳಿ 46 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ 11 ಮಂದಿಯಲ್ಲಿ ವೈರಾಣು ಇರುವುದು ದೃಢಪಟ್ಟಿದೆ.

ಪಿ.ಜೆ.‌ ಬಡಾವಣೆಯ 75 ವರ್ಷದ ವೃದ್ಧ, ನಿಟುವಳ್ಳಿಯ 60 ವರ್ಷದ ವೃದ್ದೆ ಹಾಗೂ ಹರಿಹರದ ಜೆ. ಸಿ. ಬಡಾವಣೆಯ 73 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ. 244 ಮಂದಿ ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 9213 ಜನರು ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 2753 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ.

ABOUT THE AUTHOR

...view details