ದಾವಣಗೆರೆ:ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಹನಗವಾಡಿ ವೀರೇಶ್ ಅವರ ಪದಗ್ರಹಣ ಸಮಾರಂಭವನ್ನು, ಇದೇ 15ರಂದು ನಗರದ ಶಾಮನೂರು ಜಯದೇವಪ್ಪ ಕಲ್ಯಾಣ ಮಂಟಪದಲ್ಲಿ ನಡೆಸುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ ತಿಳಿಸಿದರು.
ಫೆ.15ರಂದು ದಾವಣಗೆರೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ - ಹನಗವಾಡಿ ವೀರೇಶ್ ಪದಗ್ರಹಣ ಸಮಾರಂಭ
ದಾವಣಗೆರಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಹನಗವಾಡಿ ವೀರೇಶ್ ಅವರ ಪದಗ್ರಹಣ ಸಮಾರಂಭವನ್ನು ಇದೇ 15ರಂದು ಹಮ್ಮಿಕೊಳ್ಳಲಾಗಿದೆ.
ಪದಗ್ರಹಣ ಸಮಾರಂಭ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ15ರಂದು ಬೆಳಿಗ್ಗೆ 11.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ, ನಾನು ಇಷ್ಟು ದಿನಗಳ ಕಾಲ ಪಕ್ಷ, ಜಿಲ್ಲಾ ನಾಯಕರು, ಕಾರ್ಯಕರ್ತರ ಪರವಾಗಿ ಕೆಲಸ ಮಾಡಿದ್ದೇನೆ, ಇದೀಗ ಹನಗವಾಡಿ ವೀರೇಶ್ ಅವರು ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಅವರು ಹೆಚ್ಚಿನ ರೀತಿಯಲ್ಲಿ ಕೆಲಸ ನಿರ್ವಹಿಸಲಿ ಎಂದು ಆಶೀಸುತ್ತೇನೆ ಎಂದರು.
ಈ ಸಮಾರಂಭಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ, ಶಾಸಕರಾದ ಎಸ್ ಎ ರವೀಂದ್ರನಾಥ್, ಸಂಸದ ಜಿಎಂ ಸಿದ್ದೇಶ್ವರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.