ಕರ್ನಾಟಕ

karnataka

ETV Bharat / state

ನವೆಂಬರ್ 12ರಂದು ದಾವಣಗೆರೆ ಮಹಾನಗರ ಪಾಲಿಕೆಗೆ ಚುನಾವಣೆ - corporation election news,

ದಾವಣಗೆರೆ ಮಹಾನಗರ ಪಾಲಿಕೆಯ 45 ವಾರ್ಡ್​ಗಳಿಗೆ ಚುನಾವಣೆ ನಡೆಯಲಿದ್ದು, ನ. 14 ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಮಹಾನಗರ ಪಾಲಿಕೆಗೆ ಚುನಾವಣೆ

By

Published : Oct 21, 2019, 3:05 AM IST

ದಾವಣಗೆರೆ: ರಾಜ್ಯ ಚುನಾವಣಾ ಆಯೋಗ ದಾವಣಗೆರೆ ಮಹಾನಗರ ಪಾಲಿಕೆಗೆ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದು, ನವೆಂಬರ್ 12 ರಂದು ಚುನಾವಣೆ ನಡೆಸಲು ಆದೇಶ ಹೊರಡಿಸಲಾಗಿದೆ.

ದಾವಣಗೆರೆ ಮಹಾನಗರ ಪಾಲಿಕೆಯ 45 ವಾರ್ಡ್​ಗಳಿಗೆ ಚುನಾವಣೆ ನಡೆಯಲಿದ್ದು, ನ. 14 ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ರಾಜ್ಯ ಚುನಾವಣಾ ಆಯೋಗ ದಾವಣಗೆರೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ನ.12 ರಂದು ನಡೆಸಲಿದ್ದು, ನ. 12 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದೆ.

ದಾವಣಗೆರೆ

ಈ ಆದೇಶದ ಅನ್ವಯ ಅ. 24 ರಿಂದ ಜಿಲ್ಲಾ ಚುನಾವಣಾ ಆಧಿಕಾರಿ ಅಧಿಸೂಚನೆ ಹೊರಡಿಸಲಿದ್ದು, ಅ. 30ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿರುತ್ತದೆ. ನ.2 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನ. 4 ರಂದು ನಾಮ ಪತ್ರ ಹಿಂತಗೆದುಕೊಳ್ಳಲು ಕೊನೆಯ ದಿನವಾಗಿದೆ. ನ. 12 ರಂದು ಮತದಾನ ನಡೆಯಲಿದ್ದು, ನ.13 ರಂದು ಅವಶ್ಯವಿದ್ದರೆ ಮರು ಮತದಾನ ನಡೆಯಲಿದೆ. ನ.14 ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಆದರೆ ಇನ್ನೂ ಮೀಸಲಾತಿ ಫೈನಲ್ ಪಟ್ಟಿ‌ ಬಿಡುಗಡೆ ಮಾಡಿಲ್ಲವಾದ್ದರಿಂದ ಆಕಾಂಕ್ಷಿಗಳ ಎದೆಯಲ್ಲಿ ಢವಢವ ಶುರುವಾಗಿದೆ.

ABOUT THE AUTHOR

...view details