ಕರ್ನಾಟಕ

karnataka

ETV Bharat / state

ಕೊರೊನಾ ಪರೀಕ್ಷೆ ಕುರಿತು ದಾವಣಗೆರೆ ಡಿಸಿ ಸಭೆ: ಜನರ ಗಂಟಲು ದ್ರವ​ ಪರೀಕ್ಷೆ ಹೆಚ್ಚಿಸುವಂತೆ ಸಲಹೆ - davanagere latest news

ದಾವಣಗೆರೆ ಜಿಲ್ಲಾಧಿಕಾರಿ ಮಹಂತೇಶ ಬೀಳಗಿ ಕೊರೊನಾ ಪರೀಕ್ಷೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಎಸ್‍ಎಸ್ ಹೈಟೆಕ್ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

davanagere Dc
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

By

Published : May 16, 2020, 4:01 PM IST

ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಕೊರೊನಾ ಪರೀಕ್ಷೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಎಸ್‍ಎಸ್ ಹೈಟೆಕ್ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಪ್ರತಿದಿನ ಸಂಗ್ರಹಿಸಲಾಗುತ್ತಿರುವ ಕೋವಿಡ್-19 ಗಂಟಲು ದ್ರವ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು, ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಲ್ಯಾಬ್‍ಗಳಿಗೆ ರವಾನಿಸುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಜೊತೆಗೆ ಎಸ್‍ಎಸ್ ಹೈಟೆಕ್ ಆಸ್ಪತ್ರೆಯ ಪಿಸಿಆರ್ ಲ್ಯಾಬ್‍ನಲ್ಲಿ ಕೋವಿಡ್ ಪರೀಕ್ಷೆ ನಡೆಸುವ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತ್ ಸಿಇಒ ಪದ್ಮಾ ಬಸವಂತಪ್ಪ, ಎಸ್‍ಎಸ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ABOUT THE AUTHOR

...view details