ದಾವಣಗೆರೆ: ಕೋವಿಡ್ ಎರಡನೇ ಅಲೆ ತಡೆಯಲು ದಾವಣಗೆರೆ ಜಿಲ್ಲಾಡಳಿತದಿಂದ ಸಿದ್ಧತೆ ನಡೆಸಲಾಗಿದೆ. ದಾವಣಗೆರೆಯಲ್ಲಿ ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಬೇರೆ ಬೇರೆ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದರಿಂದ ತಕ್ಷಣ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆ ನಡೆಸಿ, ಕೆಎಸ್ಆರ್ಟಿಸಿ ಬಸ್ಗಳಲ್ಲಿ ಹೊರ ರಾಜ್ಯದಿಂದ ಸಂಚರಿಸುವ ಪ್ರಯಾಣಿಕರ ಮೇಲೆ ಹಾಗೂ ನಿರ್ವಹಕ, ಚಾಲಕರ ಮೇಲೆ ನಿಗಾ ಇರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಎಪಿಎಂಸಿಗಳಲ್ಲಿ ಹಾಗೂ ಈರುಳ್ಳಿ ಮಾರುಕಟ್ಟೆಗೆ ಹೊರ ರಾಜ್ಯದ ವ್ಯಾಪಾರಸ್ಥರು ಹಾಗೂ ಲಾರಿ ಚಾಲಕರು, ಕ್ಲೀನರ್, ಹಮಾಲರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಕೋವಿಡ್ ಎರಡನೇ ಅಲೆ ಜಿಲ್ಲೆಗೆ ಬಾರದಂತೆ ಜಿಲ್ಲಾಡಳಿತದಿಂದ ಅತ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಪ್ರತಿನಿತ್ಯ ಸಾವಿರಾರು ಜನರಿಗೆ ಟೆಸ್ಟ್ ಮಾಡಲಾಗುತ್ತಿದೆ.
ಜಾತ್ರೆಗಳು, ಜನಸಂದಣಿ ಪ್ರದೇಶಗಳಿಗೆ ಜನರು ಹೋಗದಂತೆ ಸ್ವಯಂ ನಿರ್ಬಂಧನೆ ಮಾಡಿಕೊಳ್ಳಬೇಕು. ಜನರು ಸ್ವಯಂ ನಿರ್ಬಂಧಗಳನ್ನು ಹೇರಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮನವಿ ಮಾಡಿದರು. ಇನ್ನು ವ್ಯಾಕ್ಸಿನ್ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿರುವ ಅಧಿಕಾರಿಗಳಿಗೆ ವ್ಯಾಕ್ಸಿನ್ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.