ಕರ್ನಾಟಕ

karnataka

ETV Bharat / state

ದಾವಣಗೆರೆಯಲ್ಲಿ‌ ಕೊರೊನಾ ನಿಯಂತ್ರಣ: ಸಿಬ್ಬಂದಿಯನ್ನು ಅಭಿನಂದಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ - Tunga Bhadra Hall of Davangere District Sheet

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಕೋವಿಡ್​ ನಿಯಂತ್ರಣಕ್ಕಾಗಿ ಶ್ರಮಿಸಿದ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.

District Secretary in charge of staff congratulates
ದಾವಣಗೆರೆಯಲ್ಲಿ‌ ನಿಯಂತ್ರಣಕ್ಕೆ ಬರುತ್ತಿದೆ ಕೊರೊನಾ: ಸಿಬ್ಬಂದಿಯನ್ನು ಅಭಿನಂದಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

By

Published : Dec 4, 2020, 3:59 PM IST

ದಾವಣಗೆರೆ: ಜಿಲ್ಲೆಯಲ್ಲಿ ಜನರ ನಿದ್ದೆಗೆಡಿಸಿದ್ದ ಕೊರೊನಾ ಸೋಂಕು ಸದ್ಯ ನಿಯಂತ್ರಣಕ್ಕೆ ಬಂದಿದೆ. ಇದಕ್ಕಾಗಿ ಶ್ರಮಿಸಿದ ಡಿಸಿ, ಎಸ್​ಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಅಭಿನಂದನೆ ಸಲ್ಲಿಸಿದ್ದಾರೆ.

ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಪ್ರಯತ್ನ ಮುಂದುವರೆಸಿ ಅದಕ್ಕೆ ಪೂರ್ಣ ವಿರಾಮ ಇಡಬೇಕಿದೆ ಎಂದರು.

ಕೋವಿಡ್​ ನಿಯಂತ್ರಣಕ್ಕಾಗಿ ಶ್ರಮಿಸಿದ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ ಉಸ್ತುವಾರಿ ಕಾರ್ಯದರ್ಶಿ

ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಕೊರೊನಾ ಪ್ರಕರಣಗಳ ಅಂಕಿ-ಅಂಶಗಳ ಮಾಹಿತಿ ಪಡೆದ ಬಳಿಕ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಯ ಸಹಕಾರ ಹಾಗೂ ಪ್ರಾಮಾಣಿಕ ಪ್ರಯತ್ನದಿಂದ ಜಿಲ್ಲೆಯಲ್ಲಿ ವೈರಾಣು ಹರಡುವಿಕೆ ನಿಯಂತ್ರಣಕ್ಕೆ ಬಂದಿದೆ. ಆರಂಭದ ದಿನಗಳಲ್ಲಿ ಈ ಮಾರಕ ವೈರಾಣು ಬಹಳ ಆತಂಕ ಹುಟ್ಟಿಸಿತ್ತು. ಹೆಚ್ಚು ಪಾಸಿಟಿವ್ ಪ್ರಕರಣಗಳು ಇರುವ ಜಿಲ್ಲೆಗಳಲ್ಲಿ ದಾವಣಗೆರೆಯೂ ಒಂದಾಗಿತ್ತು. ಆದ್ರೆ ಪ್ರಸ್ತುತ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದೆ. ಆರೋಗ್ಯ ಇಲಾಖೆಯ ವೈದ್ಯರು, ದಾದಿಯರು, ಸಿಬ್ಬಂದಿ ತಾವು ಕೊರೊನಾ ಪಾಸಿಟಿವ್‍ಗೆ ಒಳಗಾದರೂ ಎದೆಗುಂದದೆ ಕಾರ್ಯನಿರ್ವಹಿಸಿದ ಪರಿಣಾಮ ಒಳ್ಳೆಯ ಫಲಿತಾಂಶ ಬಂದಿದೆ. ಸದ್ಯ ಪಾಸಿಟಿವ್​ ಪ್ರಕರಣಗಳ ಪ್ರಮಾಣ ಹಾಗೂ ಸಾವಿನ ಪ್ರಮಾಣ ಶೇ. 1ರಷ್ಟಿದ್ದು, ಸಂಘಟಿತ ಕಾರ್ಯ ಫಲ ನೀಡಿದೆ ಎಂದರು.

ಇದನ್ನು ಓದಿ: ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿದ ಸಚಿವ ಈಶ್ವರಪ್ಪ

ಈಗಾಗಲೇ ಕೊರೊನಾ ಎರಡನೇ ಅಲೆಯ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದು, ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ. ಈ ಸಂಬಂಧ ಜಿಲ್ಲೆಯಲ್ಲಿ ಐಇಸಿ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಬೇಕಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಯ್ದುಕೊಳ್ಳಲು ವಿವಿಧ ಇಲಾಖೆಗಳು ಹೆಚ್ಚು ಹೆಚ್ಚು ಪ್ರಚಾರ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಸದ್ಯ ಕೊರೊನಾ ಚೇತರಿಕೆ ಪ್ರಮಾಣ ಶೇ. 98ರಷ್ಟಿದೆ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 1,62,614 ಮಂದಿಯ ಗಂಟಲು ದ್ರವದ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಿದ್ದು, 16,095 ಮಂದಿಗೆ ಸೋಂಕು ಖಚಿತವಾಗಿದೆ ಹಾಗೂ 1,48,519 ಮಂದಿಗೆ ನೆಗೆಟಿವ್ ಬಂದಿರುತ್ತದೆ. 2,145 ಗಂಟಲು ದ್ರವದ ಮಾದರಿಗಳ ಫಲಿತಾಂಶ ಬಾಕಿ ಇದೆ. 21,093 ಜನರಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 263 ಸೋಂಕಿತರ ಮರಣ ಸಂಭವಿಸಿದ್ದು, ಇವುಗಳ ಪೈಕಿ 21 ವ್ಯಕ್ತಿಗಳು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯ ಯಾವುದೇ ಪ್ರದೇಶದಲ್ಲಿ 20ಕ್ಕಿಂತ ಹೆಚ್ಚು ಪ್ರಕರಣಗಳು ಕಂಡು ಬಂದಿರದ ಕಾರಣ ಕಂಟೈನ್‍ಮೆಂಟ್ ವಲಯಗಳು ಇಲ್ಲ. ಜಿಲ್ಲಾ ಚಿಗಟೇರಿ ಆಸ್ಪತ್ರೆ, ಎಸ್‍ಎಸ್ ಆಸ್ಪತ್ರೆ, ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಪ್ರಯೋಗ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ ಒಂದು ವಾರದಲ್ಲಿ ಪ್ರತಿದಿನ ಸರಾಸರಿ 1100ರಷ್ಟು ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ಅಕ್ಟೋಬರ್ ತಿಂಗಳಿಂದ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಘಟಕ ಕಾರ್ಯನಿರ್ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details