ಕರ್ನಾಟಕ

karnataka

ETV Bharat / state

ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ: ಮತದಾನ ಬಹಿಷ್ಕರಿಸಿ ಹೊರ ನಡೆದ ಕಾಂಗ್ರೆಸ್​​ - ಬಿಜೆಪಿ ಪಾಲಿಕೆ ಸದಸ್ಯ ಬಿ.ಜಿ. ಅಜಯ್ ಕುಮಾರ್ ಮೇಯರ್

ದಾವಣಗೆರೆ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

Congress held to boycott polls
ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ

By

Published : Feb 19, 2020, 1:36 PM IST

ದಾವಣಗೆರೆ:ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲಿಕೆ ಮುಂಭಾಗ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದ್ರು.

ತೀವ್ರ ಕುತೂಹಲ ಕೆರಳಿಸಿದ್ದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಾಲಿಕೆ ಸದಸ್ಯ ಬಿ.ಜಿ.ಅಜಯ್ ಕುಮಾರ್ ಮೇಯರ್ ಆಗಿಯೂ, ಸೌಮ್ಯ ನರೇಂದ್ರ ಕುಮಾರ್ ಉಪಮೇಯರ್ ಆಗಿಯೂ ಆಯ್ಕೆಯಾದರು.

ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ

ಮೇಯರ್, ಉಪಮೇಯರ್ ಮತದಾನ ಬಹಿಷ್ಕರಿಸಿ ಹೊರ ನಡೆದ ಕಾಂಗ್ರೆಸ್:

ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಮತದಾನ ಬಹಿಷ್ಕರಿಸಿದ ಕಾಂಗ್ರೆಸ್ ನಾಯಕರು, ಜಿಲ್ಲಾ ಚುನಾವಣಾಧಿಕಾರಿ ವಿ. ಪಿ. ಇಕ್ಕೇರಿ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

ಮತದಾನ ಬಹಿಷ್ಕರಿಸಿ ಹೊರ ನಡೆದ ಕಾಂಗ್ರೆಸ್​​

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್​ನ ಆರು ಮಂದಿ ಎಂಎಲ್​​ಸಿಗಳು, 19 ಕಾರ್ಪೊರೇಟರ್​​ಗಳು ಆಗಮಿಸಿದ್ದರು. ಆದ್ರೆ ಕೈ ಪಾಲಿಕೆ ಸದಸ್ಯರಾದ ಶ್ರೀನಿವಾಸ್, ಶ್ವೇತಾ ಶ್ರೀನಿವಾಸ್, ಯಶೋದಾ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಯಿತು. ಇಕ್ಕೇರಿ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು ಚುನಾವಣಾ ಪಟ್ಟಿಯಲ್ಲಿ ಸ್ಥಳೀಯರಲ್ಲದ ಎಂಎಲ್​​ಸಿಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿ ಈ ಬಗ್ಗೆ ತನಿಖೆ ನಡೆಸಿದ್ದು, ಮೇಲ್ನೋಟಕ್ಕೆ ಚುನಾವಣೆಗೆ ಮಾತ್ರ ಸೇರಿಸಲಾಗಿದೆ ಎಂಬುದು ಸ್ಪಷ್ಟವಾದರೂ ಮತದಾನಕ್ಕೆ ಅವಕಾಶ ಕೊಟ್ಟಿರುವುದು ಕಾನೂನು ಬಾಹಿರ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು.

ಶಾಮನೂರು ಶಿವಶಂಕರಪ್ಪ ಮಾತನಾಡಿ, ಕಾಂಗ್ರೆಸ್​​ನ ಮೂವರು ಸದಸ್ಯರನ್ನು ಬಿಜೆಪಿ ಹಣ ಕೊಟ್ಟು ಖರೀದಿಸಿದೆ. ಈ ಮೂಲಕ ವಾಮಮಾರ್ಗದಿಂದ ಅಧಿಕಾರಕ್ಕೇರಿದೆ. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details