ದಾವಣಗೆರೆ:ಜಿಲ್ಲೆಯಲ್ಲಿ ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಅಭ್ಯರ್ಥಿಗಳ ಹಣೆಬರಹವನ್ನು ಮತದಾರರು ಬರೆದಿದ್ದು, ಅವರ ಭವಿಷ್ಯ ಸ್ಟ್ರಾಂಗ್ ರೂಮ್ನಲ್ಲಿ ಭದ್ರಾವಾಗಿದೆ. ಮತ ಎಣಿಕೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅರುಣ್ ಕೆ ಅವರು ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇವಿಎಂ ಮತ ಯಂತ್ರಗಳನ್ನು ಸದ್ಯ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸ್ಟ್ರಾಂಗ್ ರೂಮ್ನಲ್ಲಿ ಇರಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಪೋಲಿಸ್ ಸಿಆರ್ಪಿಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಒಟ್ಟು 84 ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ.
ಜಿಲ್ಲಾಧಿಕಾರಿಯಿಂದ ಮಾಹಿತಿ:ಈ ವೇಳೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ''ದಾವಣಗೆರೆ ಜಿಲ್ಲಾಡಳಿತ ಮತ ಎಣಿಕೆಗೆ ಸರ್ವ ಸನ್ನದ್ಧವಾಗಿದೆ. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆಗೆ ಸಿದ್ಧತೆ ನಡೆಸಲಾಗಿದ್ದು, ಮೂರು ಬ್ಲಾಕ್ಗಳಲ್ಲಿ ಮತ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಂದು ಕೊಠಡಿಯಲ್ಲಿ ಮತ ಎಣಿಕೆ ಮಾಡಲು 14 ಟೇಬಲ್ಗಳನ್ನು ಅಳವಡಿಲಾಗಿದ್ದು, ಒಂದು ಟೇಬಲ್ಗೆ ಮೂರು ಜನ ಸಿಬ್ಬಂದಿ ನೇಮಕ ಮಾಡಲಾಗಿದೆ. ಬೆಳಿಗ್ಗೆ 8ಗಂಟೆಯಿಂದ ಅಂಚೆ ಮತ ಹಾಗೂ ಹಿರಿಯ ನಾಗರಿಕರ, ವಿಶೇಷಚೇತನರ ಮತ ಎಣಿಕೆ ಜರುಗಲಿದೆ. ಬೆಳಿಗ್ಗೆ 8.30ಕ್ಕೆ ಇವಿಎಂ ಮತ ಎಣಿಕೆ ಆರಂಭವಾಗಲಿದೆ.
ಇನ್ನು ಅಂಚೆ ಮತಗಳು, ವಿಶೇಷಚೇತನರ, ಹಿರಿಯ ನಾಗರಿಕ ಮತಗಳು 9,340ಗಳಿದ್ದು, ಬೆಳಿಗ್ಗೆ 8 ಗಂಟೆಯವರೆಗೆ ಅಂಚೆ ಮತ ಸ್ವೀಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1.30ಕ್ಕೆ ಬಹುತೇಕ ಫಲಿತಾಂಶ ಪ್ರಕಟ ಆಗಲಿದೆ. ಮತ ಎಣಿಕೆ ಕಾರ್ಯಕ್ಕೆ 650 ಸಿಬ್ಬಂದಿ ನೇಮಕ ಮಾಡಲಾಗಿದ್ದು, ಜಗಳೂರು- 19, ಹರಿಹರ- 17, ದಾವಣಗೆರೆ ಉತ್ತರ- 18, ದಾವಣಗೆರೆ ದಕ್ಷಿಣ- 16, ಚನ್ನಗಿರಿ- 19 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಇನ್ನು ಉಳಿದ ಮಾಯಕೊಂಡ- 18, ಹೊನ್ನಾಳಿ- 18 ಸುತ್ತುಗಳಲ್ಲಿ ಮತ ಎಣಿಕೆ ಮಾಡ್ತೇವೆ ಎಂದು
ಜಿಲ್ಲಾಧಿಕಾರಿ ಶಿವಾನಂದ ಕಪಾಶಿ ಮಾಹಿತಿ ನೀಡಿದ್ರು.