ಕರ್ನಾಟಕ

karnataka

ETV Bharat / state

ಮಾಯಕೊಂಡ, ಜಗಳೂರು ಕ್ಷೇತ್ರಗಳಲ್ಲಿ ಬಿಎಸ್​​ವೈ ಭರ್ಜರಿ ಪ್ರಚಾರ - election news

ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಂದು ದಾವಣಗೆರೆ ಜಿಲ್ಲೆಯ ಜಗಳೂರು ಮತ್ತು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು.

davangere-bsy-campaigned-in-mayakonda-and-jagaluru-constituencies
ದಾವಣಗೆರೆ: ಮಾಯಕೊಂಡ, ಜಗಳೂರು ಕ್ಷೇತ್ರಗಳಲ್ಲಿ ಬಿಎಸ್​​ವೈ ಭರ್ಜರಿ ಪ್ರಚಾರ

By

Published : Apr 25, 2023, 7:53 PM IST

ಮಾಯಕೊಂಡ, ಜಗಳೂರು ಕ್ಷೇತ್ರಗಳಲ್ಲಿ ಬಿಎಸ್​​ವೈ ಭರ್ಜರಿ ಪ್ರಚಾರ

ದಾವಣಗೆರೆ: ಜಿಲ್ಲೆಯ ಜಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಮತ್ತು ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ನಾಯ್ಕ್ ಪರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳಾರ ಭರ್ಜರಿ ರೋಡ್​ ಶೋ ಮೂಲಕ ಮತಬೇಟೆ ನಡೆಸಿದರು. ಎರಡು ಕ್ಷೇತ್ರಗಳಲ್ಲೂ ಪ್ರಚಾರ ನಡೆಸಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.

ದಾವಣಗೆರೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಾಡ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, "ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ, ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಹಣದ ಬಲದಿಂದ, ಹೆಂಡದ ಬಲ, ಜಾತಿಯ ವಿಷ ಬೀಜ ಬಿತ್ತಿ ಅಧಿಕಾರಕ್ಕೆ ಬರುವುದು ಮೊದಲಿತ್ತು. ಆದರೆ ಈಗ ಅದ್ಯಾವುದು ನಡೆಯೋದಿಲ್ಲ ಎಂದು ಹೇಳಿದರು.

ಚುನಾವಣೆ ಮುಗಿಯವವರೆಗೂ ಮನೆ ಸೇರುವುದಿಲ್ಲ: ಸರ್ಕಾರಿ ಸೌಲಭ್ಯಗಳ ಬಗ್ಗೆ, ಮೀಸಲಾತಿ ಹೆಚ್ಚಳದ ಬಗ್ಗೆ ಮನೆ ಮನೆಗೆ ತಿಳಿಸುವ ಕೆಲಸ ಮಾಡಬೇಕಿದೆ, ಇನ್ನು 8 ದಿನಗಳು ಮಾತ್ರ ಚುನಾವಣೆ ಇದೆ ಎಂದುಕೊಂಡು ಕೆಲಸ ಮಾಡಬೇಕು. ನೀವೆಲ್ಲ ಮನಸ್ಸು ಮಾಡಿದರೆ ಈ ಕ್ಷೇತ್ರದ ಸುತ್ತಮುತ್ತಲಿನ ಕ್ಷೇತ್ರಗಳನ್ನು ಗೆಲ್ಲಿಸುವ ಶಕ್ತಿ ನಿಮ್ಮಲ್ಲಿ ಇದೆ‌ ಎನ್ನುವ ಮೂಲಕ ಕಾರ್ಯಕರ್ತರನ್ನು ಬಿಎಸ್​ವೈ ಹುರಿದುಂಬಿಸಿದರು. ನಾನು 81ನೇ ವರ್ಷಕ್ಕೆ ಕಾಲಿಟ್ಟಿದ್ದೇನೆ, ಚುನಾವಣೆ ಮುಗಿಯವರೆಗೂ ಮನೆ ಸೇರುವುದಿಲ್ಲ, ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಶತಸಿದ್ಧ, ಕಾಂಗ್ರೆಸ್ ಎಲ್ಲಿಯೂ ಕಾಣಿಸುತ್ತಿಲ್ಲ‌. ಈ ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ಹೆಸರಿಲ್ಲದಂತೆ ಆಗುತ್ತದೆ ಎಂದು ಬಿಎಸ್​​ವೈ ವ್ಯಂಗ್ಯವಾಡಿದರು.

ಅಭ್ಯರ್ಥಿಗಳನ್ನು ಆರಿಸಿ ಕಳುಹಿಸಿ - ಬಿಎಸ್​​ವೈ ಮನವಿ: ಜಗಳೂರು ಹಾಗೂ ಮಾಯಕೊಂಡ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಆರಿಸಿ ಕಳುಹಿಸಿ ಎಂದು ಬಿ ಎಸ್​​ ಯಡಿಯೂರಪ್ಪ ಮತದಾರರಲ್ಲಿ ಮನವಿ ಮಾಡಿಕೊಂಡರು. ಜಗಳೂರು ಪಟ್ಟಣದಲ್ಲಿ ಬೃಹತ್ ರೋಡ್ ಶೋ ಮಾಡುವ ಮೂಲಕ ಬಿಎಸ್​​ವೈ ಶಕ್ತಿ ಪ್ರದರ್ಶಿಸಿ, ಸರ್ಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡುವ ಮೂಲಕ ಮತಯಾಚಿಸಿರು. ಇನ್ನು ಲಿಂಗಾಯತರೇ ಅಧಿಕವಿರುವ ಮಾಯಕೊಂಡ ಕ್ಷೇತ್ರದ ಬಾಡ ಹೋಬಳಿಯಲ್ಲಿ ಬಹಿರಂಗ ಸಭೆ ನಡೆಸಿದ್ರು.

ಬಿ. ಎಸ್. ಯಡಿಯೂರಪ್ಪನವರೇ ಬಹುದೊಡ್ಡ ನಾಯಕ:ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗಿಂತ ಕರ್ನಾಟಕ ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಬಹುದೊಡ್ಡ ನಾಯಕರಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಮತ್ತು ಸಿದ್ಧತೆ ಬಗ್ಗೆ 'ಈಟಿವಿ ಭಾರತ'ಕ್ಕೆ ನೀಡಿದ ಎಕ್ಸ್​ಕ್ಲೂಸಿವ್ ಸಂದರ್ಶನದಲ್ಲಿ ಅವರು ಮಾತನಾಡುತ್ತ, ಕರ್ನಾಟಕದ ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗೆ ಇರುವಷ್ಟು ಪಾಪುಲ್ಯಾರಿಟಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಾತನಾಡುವುದು ಸುಲಭ, ಜೀರ್ಣಿಸಿಕೊಳ್ಳುವುದು ಕಷ್ಟ : ಹೆಚ್ ಡಿ ದೇವೇಗೌಡ

ABOUT THE AUTHOR

...view details