ದಾವಣಗೆರೆ:ಜಿಲ್ಲೆಯ ಹರಿಹರ ತಾಲೂಕು ಕುಂಬಳೂರು ಗ್ರಾಮದನಕಲಿ ವೈದ್ಯನ ಕ್ಲಿನಿಕ್ಗೆಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಅವಿನಾಶ್ ಕುಮಾರ್ ಎಂಬ ನಕಲಿ ವೈದ್ಯ ಕ್ಲಿನಿಕ್ ಇಟ್ಟುಕೊಂಡು ಕೋವಿಡ್ ರೋಗಿಗಳಿಗೆ ಔಷಧಿ ನೀಡುತ್ತಿದ್ದಾನೆ ಎಂದು ಗ್ರಾಮದ ಯುವಕರು ಜಿಲ್ಲಾಧಿಕಾರಿಗೆ ವಾಟ್ಸ್ ಆ್ಯಪ್ ಮೂಲಕ ಮಾಹಿತಿ ನೀಡಿದ್ದರು.
ನಕಲಿ ವೈದ್ಯಕೀಯ ಸರ್ಟಿಫಿಕೇಟ್ ಕ್ಲಿನಿಕ್ ನಡೆಸುತ್ತಿದ್ದ ವೈದ್ಯ ಯಾವುದೇ ವೈದ್ಯಕೀಯ ಪದವಿ ಪಡೆದಿಲ್ಲ. ಕೆಎಂಪಿಇಯಲ್ಲಿ ನೋಂದಣಿಯೂ ಮಾಡಿಕೊಂಡಿಲ್ಲ. ಆದರೂ, ಕುಂಬಳೂರು ಗ್ರಾಮದ ಮನೆಯಲ್ಲಿ ಎಲ್ಲಾ ವೈದ್ಯಕೀಯ ಉಪಕರಣಗಳನ್ನು ಇಟ್ಟುಕೊಂಡು ಚಿಕಿತ್ಸೆ ನೀಡುತ್ತಿರುವುದು ತಿಳಿದುಬಂದಿದೆ.
ಇದನ್ನೂಓದಿ: ಮನೆಯಲ್ಲಿಯೇ ಅಕ್ರಮ ಮದ್ಯ ಮಾರಾಟ: 50 ಸಾವಿರ ಮೌಲ್ಯದ ಮದ್ಯ ವಶ
ನಕಲಿ ವೈದ್ಯನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಕೋವಿಡ್ ಚಿಕಿತ್ಸೆಯ ಹೆಸರಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ ಹಾವಳಿ ಇರುವುದು ನಮ್ಮ ಗಮನಕ್ಕೆ ಬಂದಿದೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.