ದಾವಣಗೆರೆ: ಮಹಾನಗರ ಪಾಲಿಕೆಯ 45 ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು
377 ಬೂತ್ ಗಳನ್ನು ತೆರೆಯಲಾಗಿದ್ದು, ಇವಿಎಂ ಮತಯಂತ್ರಗಳಲ್ಲಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ದಾವಣಗೆರೆ ಮಹಾನಗರ ಪಾಲಿಕೆಯ 45 ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಒಟ್ಟು 208 ಅಭ್ಯರ್ಥಿಗಳ ಭವಿಷ್ಯವನ್ನು ಬೆಣ್ಣೆನಗರಿ ಮಂದಿ ಬರೆಯಲಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಯಾವುದೇ ಅಕ್ರಮ ನಡೆಯದಂತೆ
ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತ ಚಲಾಯಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. 28 ಅತಿ ಸೂಕ್ಷ್ಮ, 67 ಸೂಕ್ಷ್ಮ , 282 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ 521 ರೌಡಿಗಳನ್ನು ಗುರುತಿಸಿ, ಅವರ ಮೇಲೆ ಕ್ರಮಕ್ಕೆ ಮುಂದಾಗಲಾಗಿದೆ.
ಇನ್ನು ಜಿಲ್ಲಾ ದಂಡಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಇದುವರೆಗೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆಯಾಗಲೀ, ಅಕ್ರಮ ನಡೆದಿರುವ ಕುರಿತಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಜನರು ತಮ್ಮ ಮತ ಚಲಾಯಿಸಬೇಕು ಎಂದು ಮನವಿ ಮಾಡಿದ್ದಾರೆ. 377 ಮಂದಿಯಿಂದ ಈಗಾಗಲೇ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಗಲಭೆ ನಡೆಯುವಂಥ ಸ್ಥಳಗಳಲ್ಲಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲ ಬೂತ್ ಗಳಲ್ಲಿಯೂ ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. 21 ಸಬ್ ಇನ್ ಸ್ಪೆಕ್ಟರ್, 8 ಇನ್ ಸ್ಪೆಕ್ಟರ್, 176 ಹೋಂ ಗಾರ್ಡ್ಸ್ ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ಈಗಾಗಲೇ ಭದ್ರತೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.