ದಾವಣಗೆರೆ: ಜಿಲ್ಲೆಯಲ್ಲಿ ಗಾಂಜಾ ಹಾಗೂ ಡ್ರಗ್ಸ್ ಜಾಲಗಳು ಕಾರ್ಯಾಚರಿಸುತ್ತಿರುವುದು ಕಂಡು ಬಂದಲ್ಲಿ ತಕ್ಷಣ ತನಿಖೆ ನಡೆಸುವಂತೆ ನಗರ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇಂಥ ಕೃತ್ಯದಲ್ಲಿ ಯಾರಾದರೂ ಭಾಗಿಯಾಗಿದ್ದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.
ಗಾಂಜಾ, ಡ್ರಗ್ಸ್ ಜಾಲ ಕಂಡು ಬಂದಲ್ಲಿ ತಕ್ಷಣ ತನಿಖೆ ನಡೆಸಿ; ದಾವಣಗೆರೆ ಎಸ್ಪಿ ಸೂಚನೆ - ‘drug mafia
ಮಾದಕ ವಸ್ತುಗಳ ಮಾರಾಟ ಹಾಗೂ ಸಂಗ್ರಹದಲ್ಲಿ ಯಾರಾದರೂ ಭಾಗಿಯಾಗಿದ್ದರೆ ಅವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಎಸ್ಪಿ ಹನುಮಂತರಾಯ ಎಚ್ಚರಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಹಾಗೂ ಅಪರಾಧ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಬೇರೆ ಜಿಲ್ಲೆಯವರಾಗಿದ್ದಾರೆ. ಈ ಹಿಂದೆ ಮಾದಕವಸ್ತುಗಳನ್ನು ಮಾರಾಟ ಮಾಡಿ ಬಂಧಿತರಾಗಿದ್ದ ಹಳೆಯ ಆರೋಪಿಗಳ ಮೇಲೆ ನಿಗಾ ವಹಿಸುವಂತೆ ಸೂಚಿಸಲಾಗಿದೆ.
ಕೊರೊನಾ ಹಿನ್ನೆಲೆ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿಲ್ಲ. ತಮ್ಮ ಊರುಗಳಿಗೆ ತೆರಳಿದ್ದಾರೆ. ಆದರೂ ಕೂಡ ವೃತ್ತಿಪರ ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್ಗಳ ಸುತ್ತಮುತ್ತ ಹದ್ದಿನ ಕಣ್ಣಿಡಲಾಗಿದೆ. ಇದುವರೆಗೆ ಯಾವುದೇ ದೂರುಗಳು ಬಂದಿಲ್ಲ. ಸುತ್ತಮುತ್ತಲಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದಿದ್ದಾರೆ.