ದಾವಣಗೆರೆ: ದಾವಣಗೆರೆ ಲೋಕಸಭೆ ಫೈಟ್ ದಿನದಿಂದ ದಿನಕ್ಕೆ ರಂಗೇರತೊಡಗಿದೆ. ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ಹಾಗು ಜಿಲ್ಲಾ ಪಂಚಾಯಿತಿ ಸದಸ್ಯ ತೇಜಸ್ವಿ ಪಟೇಲ್ ಅಸಮಾಧಾನ ಶಮನವಾಗಿದೆ.
ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಜಾರಿಲ್ಲ, ನನ್ನ ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ: ತೇಜಸ್ವಿ ಪಟೇಲ್ - ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾದ ಹೆಚ್ ಬಿ ಮಂಜಪ್ಪ
ನನ್ನನ್ನು ದಾವಣಗೆರೆ ಕ್ಷೇತ್ರದಿಂದ ಕಣಕ್ಕಿಳಿಸುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದರು. ಆದ್ರೀಗ ಟಿಕೆಟ್ ಕೈತಪ್ಪಿದೆ. ಇದರಿಂದ ನನಗೆ ಬೇಸರವಿಲ್ಲ. ನಾನು ಕಾಂಗ್ರೆಸ್ಗೇ ಬೆಂಬಲ ನೀಡುತ್ತೇನೆ ಎಂದು ತೇಜಸ್ವಿ ಪಟೇಲ್ ಹೇಳಿದರು.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ನಾಯಕರುನನ್ನನ್ನು ದಾವಣಗೆರೆ ಕ್ಷೇತ್ರದಿಂದ ಕಣಕ್ಕಿಳಿಸುವುದಾಗಿ ಹೇಳಿದ್ದರು. ಆದ್ರೀಗ ಟಿಕೆಟ್ ಕೈತಪ್ಪಿದೆ. ಹಾಗಂತ ನನಗೇನೂ ಬೇಜಾರಿಲ್ಲ. ನಾನು ಕಾಂಗ್ರೆಸ್ಗೇ ಬೆಂಬಲ ನೀಡುತ್ತೇನೆ ಎಂದು ಹೇಳಿದರು. ಇವತ್ತು ಪಟೇಲ್ ನಿವಾಸಕ್ಕೆ ತೆರಳಿದ ಮೈತ್ರಿ ಪಕ್ಷದ ಅಭ್ಯರ್ಥಿ ಹೆಚ್.ಬಿ. ಮಂಜಪ್ಪ ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಬೆಂಬಲ ಕೋರಿದರು.
ಜಿ.ಪಂ. ಸದಸ್ಯರಾಗಿರುವ ತೇಜಸ್ವಿ ಪಟೇಲ್ ಮಾಜಿ ಮುಖ್ಯಮಂತ್ರಿ ದಿ. ಜೆ.ಹೆಚ್. ಪಟೇಲ್ ವಂಶಸ್ಥರು. ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡುರಾವ್ ತೇಜಸ್ವಿ ಪಟೇಲ್ ಅವರನ್ನು ಕರೆಸಿ ಲೋಕಸಭೆ ಚುನಾವಣೆಗೆ ನಿಲ್ಲುವಂತೆ ಕೋರಿದ್ದರು. ಬಳಿಕ ಶಾಮನೂರು ಶಿವಶಂಕರಪ್ಪ ಒತ್ತಡದಂತೆ ಹೆಚ್.ಬಿ.ಮಂಜಪ್ಪರಿಗೆ ಟಿಕೆಟ್ ಫಿಕ್ಸ್ ಆಗಿತ್ತು. ಇದರಿಂದ ತೇಜಸ್ವಿ ಬೇಸರಗೊಂಡಿದ್ದರು ಎಂದೇ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ತೇಜಸ್ವಿಯವರನ್ನು ಮೈತ್ರಿ ಅಭ್ಯರ್ಥಿ ಮಂಜಪ್ಪ ಭೇಟಿ ಮಾಡಿ ಇವತ್ತು ಮಾತುಕತೆ ನಡೆಸಿದ್ದಾರೆ.