ದಾವಣಗೆರೆ:ಕೊರೊನಾದಿಂದಾಗಿ ನಗರದ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಸ್ಟೇಬಲ್ ಬಲಿಯಾಗಿದ್ದಾರೆ. ನಾರಾಯಣ ಅರಸ್ ಮೃತಪಟ್ಟ ಪೊಲೀಸ್ ಸಿಬ್ಬಂದಿಯಾಗಿದ್ದು, ಇತ್ತೀಚೆಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರು ತೀವ್ರ ಅಸ್ವಸ್ಥಗೊಂಡಿದ್ದರು.
ಕೊರೊನಾಗೆ ದಾವಣಗೆರೆ ಸಂಚಾರಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಲಿ - ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಸ್ಟೇಬಲ್
ಪೊಲೀಸ್ ಇಲಾಖೆಗೆ 1,999ರ ಬ್ಯಾಚ್ನಲ್ಲಿ ಆಯ್ಕೆಯಾಗಿದ್ದ ಅರಸ್ ಸರಳ ವ್ಯಕ್ತಿ ಆಗಿದ್ದರು. ಇದೀಗ ಕೊರೊನಾ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ
ಕೊರೊನಾಗೆ ದಾವಣಗೆರೆ ಸಂಚಾರಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಲಿ
ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ. ಪೊಲೀಸ್ ಇಲಾಖೆಗೆ 1999ರ ಬ್ಯಾಚ್ನಲ್ಲಿ ಆಯ್ಕೆಯಾಗಿದ್ದ ಅರಸ್ ಸರಳ ವ್ಯಕ್ತಿ ಆಗಿದ್ದರು. ಇಲಾಖೆಯಲ್ಲಿಯೂ ಒಳ್ಳೆಯ ಹೆಸರು ಪಡೆದಿದ್ದರು. ಅರಸ್ ಅಕಾಲಿಕ ನಿಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಎಎಸ್ಪಿ ರಾಜೀವ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.