ಕರ್ನಾಟಕ

karnataka

ETV Bharat / state

ಕೋವಿಡ್ ನಿರ್ಮೂಲನೆಗೆ ಸಹಕರಿಸುವಂತೆ ದಾವಣಗೆರೆ ಜಿಲ್ಲಾಧಿಕಾರಿ ಮನವಿ

ಸಾರ್ವಜನಿಕರು ಸಾಮಾಜಿಕ ಅಂತರ ಮರೆಯುತ್ತಿದ್ದು, ಮಾಸ್ಕ್ ಧರಿಸದೆ ರಸ್ತೆಗಳಲ್ಲಿ ಸಂಚರಿಸುತ್ತಿದ್ದಾರೆ. ಎಲ್ಲರು ಕೋವಿಡ್ ನಿರ್ಮೂಲನೆಗೆ ಆದಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮನವಿ ಮಾಡಿಕೊಂಡಿದ್ದಾರೆ.

Davanagere
Davanagere

By

Published : Sep 24, 2020, 2:15 PM IST

ದಾವಣಗೆರೆ: ಕೊರೊನಾ ಸೋಂಕು ಹರಡುವಿಕೆ ತಡೆಗೆ ಜನರು ಲಾಕ್‍ಡೌನ್ ವೇಳೆ ಅನುಸರಿಸಿದ ಮುಂಜಾಗ್ರತಾ ಕ್ರಮಗಳನ್ನು ಈಗ ಅನುಸರಿಸುತ್ತಿಲ್ಲ. ಇದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ಕೋವಿಡ್ ವ್ಯಾಪಕವಾಗಿ ಹರಡುವ ಸಾಧ್ಯತೆ ಇದ್ದು, ಸಾರ್ವಜನಿಕರು ಕೋವಿಡ್ ನಿರ್ಮೂಲನೆಗೆ ಆದಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮನವಿ ಮಾಡಿದರು.

ಕೋವಿಡ್ ಹರಡುವಿಕೆ ತಡೆಗಟ್ಟುವ ಸಲುವಾಗಿ ಸರ್ಕಾರ ಕಳೆದ ಮಾರ್ಚ್ ತಿಂಗಳಿನಿಂದ ಸುಮಾರು ಎರಡ್ಮೂರು ತಿಂಗಳು ಲಾಕ್‍ಡೌನ್ ಜಾರಿಗೊಳಿಸಿತ್ತು. ಈ ಅವಧಿಯಲ್ಲಿ ಸಾರ್ವಜನಿಕರು ಉತ್ತಮವಾಗಿ ಸ್ಪಂದಿಸಿ, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದ್ದರು. ಆದರೆ ಲಾಕ್‍ಡೌನ್ ಸಂಪೂರ್ಣ ಸಡಿಲಿಸಿದ ಬಳಿಕ ಸಾರ್ವಜನಿಕರು ಕೋವಿಡ್ ನಿಯಂತ್ರಿಸುವಲ್ಲಿ ತಮ್ಮ ಹೊಣೆಗಾರಿಕೆಯನ್ನು ಮರೆತು ವರ್ತಿಸುತ್ತಿದ್ದಾರೆ ಎಂದು ಹೇಳಲು ಬೇಸರವೆನಿಸುತ್ತಿದೆ ಎಂದಿದ್ದಾರೆ.

ಸಾರ್ವಜನಿಕರು ಸಾಮಾಜಿಕ ಅಂತರ ಮರೆಯುತ್ತಿದ್ದು, ಮಾಸ್ಕ್ ಧರಿಸದೆ ರಸ್ತೆಗಳಲ್ಲಿ ಸಂಚರಿಸುತ್ತಿದ್ದಾರೆ. ಕೋವಿಡ್ ಸೋಂಕಿನ ಬಗ್ಗೆ ಹೆದರುವ ಅಗತ್ಯವಿಲ್ಲ. ಆದರೆ ಮುಂಜಾಗ್ರತಾ ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದರಿಂದ ಹೆಚ್ಚು ಹೆಚ್ಚು ಜನರಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಸಾಧ್ಯವಿದೆ. ಈ ಕುರಿತಂತೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿವೆ. 60 ವರ್ಷ ಮೇಲ್ಪಟ್ಟ ಹಾಗೂ ನಾನಾ ರೋಗಗಳಿಂದ ಬಳಲುತ್ತಿರುವವರ ಸಮೀಕ್ಷೆ ಮಾಡಿ ಅವರಿಗೆ ಕೋವಿಡ್ ಪರೀಕ್ಷೆ ನಡೆಸುತ್ತಿದ್ದೇವೆ. ಆದರೆ ಕೆಲವೆಡೆ ಇದಕ್ಕೆ ಸಾರ್ವಜನಿಕರಿಂದ ಸಹಕಾರ ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೊರೊನಾ ಪರೀಕ್ಷೆಗೆ ಬಂದವರಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಚಿಕಿತ್ಸೆಯನ್ನು ತಕ್ಷಣವೇ ಪ್ರಾರಂಭಿಸುವ ಪದ್ಧತಿಯನ್ನು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದೇವೆ. ಗ್ರಾಮೀಣ ಪ್ರದೇಶಗಳಲ್ಲಿ ಅತಿ ಹೆಚ್ಚು ಪರೀಕ್ಷೆ ಮಾಡುತ್ತಿದ್ದು, ಹೆಚ್ಚಾಗಿ ಪಾಸಿಟಿವ್ ಬರುತ್ತಿದೆ. ಇದರಿಂದಾಗಿ ಮರಣ ಪ್ರಮಾಣವು ಕಳೆದೊಂದು ವಾರದಿಂದ ಕಡಿಮೆಯಾಗುತ್ತಿದೆ. ಮರಣ ಪ್ರಮಾಣ ತಗ್ಗಿಸಲು ಸಾರ್ವಜನಿಕರು ಬೇಗ ಪರೀಕ್ಷೆಗೆ ಒಳಗಾಗಿ, ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕಾಗಿದೆ ಎಂದು ಮನವಿ ಮಾಡಿದರು.

ABOUT THE AUTHOR

...view details