ದಾವಣಗೆರೆ/ಧಾರವಾಡ :ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಕುರಿತು ಹೈಕೋರ್ಟ್ ಮಧ್ಯಂತರ ತೀರ್ಪು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳ ಪುನರ್ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಇಂದಿನಿಂದ 9,10ನೇ ತರಗತಿಗಳು ಪ್ರಾರಂಭ ಆಗಿವೆ. ಕೆಲ ವಿದ್ಯಾರ್ಥಿಗಳು ಹಿಜಾಬ್ ಕಳಚಿಟ್ಟು ತರಗತಿಗಳಿಗೆ ಆಗಮಿಸಿದರು.
ನಗರದ ಮೋತಿ ವೀರಪ್ಪ, ಸೀತಮ್ಮ ಶಾಲೆಯ ತರಗತಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಂದ ಮಾಹಿತಿ ಕಲೆ ಹಾಕಿ ಧೈರ್ಯ ತುಂಬಿದರು.
ಯಾವುದೇ ಅಂಜಿಕೆ ಇಲ್ಲದೇ ತರಗತಿಗಳಿಗೆ ಬನ್ನಿ. ಯಾರಾದರೂ ಒತ್ತಡ, ಭಯ ಪಡಿಸಿದರೆ ಕೂಡಲೇ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದರು. ದಾವಣಗೆರೆ ನಗರದ ಪ್ರತಿ ಶಾಲೆಗೂ ಕೂಡ ಭೇಟಿ ನೀಡುತ್ತಿರುವ ಜಿಲ್ಲಾಧಿಕಾರಿಗಳು, ಎಲ್ಲ ಮಕ್ಕಳಿಗೆ ಧೈರ್ಯ ತುಂಬಿದ್ದು ವಿಶೇಷವಾಗಿತ್ತು.