ದಾವಣಗೆರೆ: ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ನೀಡಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಸೂಚನೆ ನೀಡಿದರು.
ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಡಿಸಿ ಸೂಚನೆ - Davanagere private hospital doctor meeting
ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಸಹ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಸೂಚನೆ ನೀಡಿದ್ದಾರೆ.
Meeting
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿದ ಅವರು, ಕೋವಿಡ್-19 ಸೋಂಕಿತರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಸರ್ಕಾರ ನಿಗದಿಪಡಿಸಿರುವ ದರಗಳಂತೆ ಕ್ರಮ ವಹಿಸಿ ಚಿಕಿತ್ಸೆ ನೀಡಬೇಕು. ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಿ, ಸರ್ಕಾರದಿಂದ ಹಣ ಪಡೆಯುವಂತೆ ಸಭೆಯಲ್ಲಿ ತಿಳಿಸಿದರು.
ಈ ವೇಳೆ, ಜಿ.ಪಂ. ಸಿಇಒ ಪದ್ಮಾ ಬಸವಂತಪ್ಪ, ಡಿಎಚ್‍ಒ ರಾಘವೇಂದ್ರಸ್ವಾಮಿ, ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಉಪಸ್ಥಿತರಿದ್ದರು.