ಕರ್ನಾಟಕ

karnataka

ETV Bharat / state

ಪ್ರತಿ ತಾಲೂಕಿನಲ್ಲೂ ಜನಸ್ಪಂದನ ಸಭೆ: ಅಧಿಕಾರಿಗಳಿಗೆ  ಡಿಸಿ ಸೂಚನೆ

ಇಂದು ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ, ಇನ್ಮುಂದೆ ಎಲ್ಲಾ ತಾಲೂಕುಗಳಲ್ಲಿ ತಹಶೀಲ್ದಾರ್​ ನೇತೃತ್ವದಲ್ಲಿ ಜನಸ್ಪಂದನ ಸಭೆ ನಡೆಸಬೇಕೆಂದು ಅಧಿಕಾರಿಗಳಿಗೆ ಆದೇಶ ನೀಡಿದ್ರು.

District commissioner
ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ

By

Published : Jan 27, 2020, 10:20 PM IST

ದಾವಣಗೆರೆ: ಪ್ರತಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನಸ್ಪಂದನ ಸಭೆ ನಡೆಸುತ್ತಿದ್ದು, ಇನ್ಮುಂದೆ ಎಲ್ಲ ತಾಲೂಕುಗಳಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಜನಸ್ಪಂದನ ಸಭೆ ನಡೆಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ ಆದೇಶಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ್​ ಬೀಳಗಿ

ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಜನಸ್ಪಂದನ ಸಭೆಗೆ ಬೇರೆ ಬೇರೆ ಊರುಗಳಿಂದ ಜನರು ಬಂದು ಮನವಿ ಮತ್ತು ದೂರುಗಳನ್ನು ನೀಡುತ್ತಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇನ್ಮುಂದೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಹಭಾಗಿತ್ವದೊಂದಿಗೆ ಜನಸ್ಪಂದನ ಸಭೆಗಳನ್ನು ನಡೆಸುವಂತೆ ತಿಳಿಸಿದರು.

ಇದೇ ವೇಳೆ, ಕುಂದವಾಡ ಗ್ರಾಮದ ನಿವಾಸಿ ಹಾಲಮ್ಮ ಎಂಬುವವರು ಗ್ರಾಮದಲ್ಲಿ ಜಾಗವನ್ನು ಕ್ರಯಕ್ಕೆ ತೆಗೆದಿಕೊಂಡಿದ್ದು, ಖಾತೆ ವರ್ಗಾವಣೆ ಮಾಡಿಸಿಕೊಂಡಿಲ್ಲ. ತನ್ನ ಹೆಸರಿಗೆ ಖಾತೆ ವರ್ಗಾವಣೆ ಮಾಡಿಸಿಕೊಡುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ಮಹಾನಗರಪಾಲಿಕೆ ಒಬ್ಬ ಸಿಬ್ಬಂದಿಯನ್ನು ಕಳುಹಿಸಿ, ಸ್ಥಳ ಪರಿಶೀಲನೆ ನಡೆಸಿ ಮುಂದಿನ 7 ದಿನಗಳೊಳಗೆ ಖಾತೆ ವರ್ಗಾವಣೆ ಮಾಡಿಸಿಕೊಂಡುವಂತೆ ಮಹಾನಗರಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.

ಇನ್ನು ಸಭೆಯಲ್ಲಿ ವಿವಿಧ ತಾಲೂಕುಗಳಿಂದ ಬಂದ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಸಲಹೆ ನೀಡಿದ್ರು.

ABOUT THE AUTHOR

...view details