ಕರ್ನಾಟಕ

karnataka

ETV Bharat / state

ದಾವಣಗೆರೆ: ತುಂಗಭದ್ರಾ ಹೊಳೆಯಲ್ಲಿ ತೇಲಿ ಬಂದ ಮೃತದೇಹ

ಅಧಿಕ ಮಳೆಯ ಹಿನ್ನೆಲೆ ದಾವಣಗೆರೆ ಹರಿಹರದ ಧಾರ್ಮಿಕ ಕ್ಷೇತ್ರ ಉಕ್ಕಡಗಾತ್ರಿಯ ಸ್ನಾನಘಟ್ಟಗಳು ಮುಳುಗಡೆಯಾಗಿವೆ.

ತುಂಗಭದ್ರಾ ಹೊಳೆಯಲ್ಲಿ ತೇಲಿ ಬಂದ ಮೃತದೇಹ
ತುಂಗಭದ್ರಾ ಹೊಳೆಯಲ್ಲಿ ತೇಲಿ ಬಂದ ಮೃತದೇಹ

By

Published : Jul 24, 2023, 3:45 PM IST

Updated : Jul 24, 2023, 4:41 PM IST

ತುಂಗಭದ್ರಾ ಹೊಳೆಯಲ್ಲಿ ತೇಲಿ ಬಂದ ಮೃತದೇಹ

ದಾವಣಗೆರೆ : ಜಿಲ್ಲೆಯ ಹರಿಹರ ತುಂಗಭದ್ರಾ ನದಿಯಲ್ಲಿ ಮೃತದೇಹ ತೇಲಿ ಬಂದಿದೆ. ಹರಿಹರ ನಗರದ ರಾಘವೇಂದ್ರ ಮಠ ಬಳಿ ನೀರಿನಲ್ಲಿ ಮೃತದೇಹ ತೇಲಿ ಬಂದಿದ್ದು, ಮೃತದೇಹದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರದ ಬಳಿ ಇರುವ ತುಂಗಾಭದ್ರ ಹೊಳೆಯಲ್ಲಿ ಈ ಘಟನೆ ನಡೆದಿದೆ. ಯಾರೋ ಆಕಸ್ಮಿಕವಾಗಿ ನದಿಯಲ್ಲಿ ಬಿದ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆ ಮೃತದೇಹ ತೇಲಿಕೊಂಡು ಬಂದಿದೆ. ಹರಿಹರ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಉಕ್ಕಡಗಾತ್ರಿ ಬಳಿ ಸ್ನಾನಘಟ್ಟಗಳು ಮುಳುಗಡೆ: ಹನಿ ನೀರಿಲ್ಲದೇ ಭಣಗುಡುತ್ತಿದ್ದ ತುಂಗಭದ್ರಾ ನದಿ ಇದೀಗ ಉಕ್ಕಿ ಹರಿಯುತ್ತಿದೆ. ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಅಪಾರ ಪ್ರಮಾಣದ ನೀರು ನದಿಯಲ್ಲಿ ಹರಿದು ಬರುತ್ತಿದ್ದು, ಇಡೀ ನದಿ ಮೈದುಂಬಿ ಹರಿಯುತ್ತಿದೆ. ದಾವಣಗೆರೆ ಜಿಲ್ಲೆಯ ಹರಿಹರದ ಬಳಿಯ ಕೂಗಳತೆಯಲ್ಲಿರುವ ಉಕ್ಕಿ ಹರಿಯುತ್ತಿರುವ ತುಂಗಾಭದ್ರಾ ನದಿ ವೀಕ್ಷಣೆಗೆ ಸಾಕಷ್ಟು ಜನ ಆಗಮಿಸುತ್ತಿದ್ದಾರೆ.‌ ಇನ್ನು ತುಂಗಾಭದ್ರಾ ನದಿ ದಂಡೆಯಲ್ಲಿ ಅಕ್ಷರಶಃ ಪ್ರವಾಹದ ಭೀತಿ ಸೃಷ್ಟಿಯಾಗಿದ್ದು, ಜಿಲ್ಲಾಡಳಿತ ಕೂಡ ಸಕಲ ಸಿದ್ದತೆಯಲ್ಲಿದೆ.‌ ಇದಲ್ಲದೇ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿರುವ ಬೆನ್ನಲ್ಲೇ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಧಾರ್ಮಿಕ ಕ್ಷೇತ್ರ ಉಕ್ಕಡಗಾತ್ರಿಯ ಸ್ನಾನಘಟ್ಟಗಳು ಮುಳುಗಡೆಯಾಗಿವೆ.

ಇಂದು ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ: ಇದಲ್ಲದೆ ಉಕ್ಕಡಗಾತ್ರಿ ಕರಿಬಸವೇಶ್ವರ ದೇಗುಲದ ಬಳಿ 20ಕ್ಕೂ ಹೆಚ್ಚು ಅಂಗಡಿ ಮುಂಗಟ್ಟುಗಳು ಮುಳುಗಡೆಯಾಗಿವೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಕ್ಷಣದಿಂದ ಕ್ಷಣಕ್ಕೆ ನದಿ ನೀರಿನ ಮಟ್ಟ ಹೆಚ್ಚಳವಾಗ್ತಿದೆ.‌ ನಿರಂತರ ಮಳೆ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದ್ದು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಹರಿಹರ ಹಾಗೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನದಿ ದಂಡೆ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.‌ ನದಿ ದಂಡೆಯಲ್ಲಿ ಯಾವುದೇ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳದಂತೆ, ನದಿ ದಂಡೆಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ನೀರಿನಲ್ಲಿ ಕೊಚ್ಚಿಹೋದ ಯುವಕ : ಇನ್ನೊಂದೆಡೆ ಬಂಡೆಯ ಮೇಲೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಯುವಕನೊಬ್ಬ ಆಕಸ್ಮಿಕವಾಗಿ​ ಕಾಲುಜಾರಿ ಬಿದ್ದು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಕೊಚ್ಚಿಹೋಗಿರುವ ಯುವಕ. ಈ ಯುವಕ ನೀರಿನಲ್ಲಿ ಕೊಚ್ಚಿಹೋಗುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ.

ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂಬುದು ತಿಳಿದುಬಂದಿದೆ. ಯುವಕ ಶರತ್ ಕುಮಾರ್ ಬಂಡೆಯ ಮೇಲೆ ನಿಂತು ಧುಮ್ಮಿಕ್ಕುವ ಜಲಪಾತವನ್ನು ವೀಕ್ಷಿಸುತ್ತಿದ್ದ. ಇದನ್ನು ಆತನ ಸ್ನೇಹಿತ ಮೊಬೈಲ್​ನಲ್ಲಿ ಚಿತ್ರೀಕರಿಸುತ್ತಿದ್ದ. ಆದರೆ, ಯುವಕ ಶರತ್ ಕುಮಾರ್ ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ.

ಇದನ್ನೂ ಓದಿ:Watch: ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ನೀರಿನಲ್ಲಿ ಕೊಚ್ಚಿಹೋದ ಯುವಕ.. ದೃಶ್ಯ ಮೊಬೈಲ್​ನಲ್ಲಿ ಸೆರೆ

Last Updated : Jul 24, 2023, 4:41 PM IST

ABOUT THE AUTHOR

...view details