ಕರ್ನಾಟಕ

karnataka

ETV Bharat / state

ಮೀಸಲಾತಿಗಾಗಿ ರಾಜ್ಯ ಸರ್ಕಾರಕ್ಕೆ ಗಡುವು : ಸತೀಶ್ ಜಾರಕಿಹೊಳಿ - ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಹೊಸದೇನೂ ನೀರಿಕ್ಷೆ ಮಾಡಲು ಸಾಧ್ಯವಿಲ್ಲ. ಕೋವಿಡ್ ಸಮಯದಲ್ಲಿ ಆಶ್ವಾಸನೆ ಕೊಟ್ಟಿದ್ದ ₹20 ಲಕ್ಷ ಕೋಟಿ ಎಲ್ಲಿ ಹೋಯಿತು?, ಏಳು ವರ್ಷದಿಂದ ನೋಡ್ತಾನೆ ಬಂದಿದ್ದೇವೆ. ಬದಲಾವಣೆ ಬಜೆಟ್ ಇವರಿಂದ ಸಿಗುವುದು ಕಷ್ಟ..

KPCC Working President Satish Zarakiholi
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸತೀಶ್ ಜಾರಕಿಹೊಳಿ

By

Published : Feb 1, 2021, 5:06 PM IST

ದಾವಣಗೆರೆ : ಶೋಷಿತರಿಗೆ ನ್ಯಾಯ ಸಿಗುವುದು ಕಷ್ಟ. ಹೀಗಾಗಿ, ಮೀಸಲಾತಿಗಾಗಿ ಹೋರಾಟ ಮಾಡುತ್ತಲೇ ಬರುತ್ತಿದ್ದೇವೆ. ಮೀಸಲಾತಿಗಾಗಿ ರಾಜ್ಯ ಸರ್ಕಾರಕ್ಕೆ ಗಡುವು ಕೊಟ್ಟಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ..

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಬಳಿಯಿರುವ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ಮೀಸಲಾತಿಗಾಗಿ ಸರ್ಕಾರಕ್ಕೆ ಗಡುವು ನಂತರ ಮುಂದಿನ ಹೋರಾಟ ನಡೆಯುತ್ತದೆ. ವಾಲ್ಮೀಕಿ‌ ಜಾತ್ರೆಯಲ್ಲೂ ಈ ಕುರಿತು ಒತ್ತಡ ಹಾಕುತ್ತೇವೆ ಎಂದು ಸರ್ಕಾರಕ್ಕೆ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸತೀಶ್ ಜಾರಕಿಹೊಳಿ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ಬಯಸಿದರೆ ಸ್ಪರ್ಧೆಗೆ ಸಿದ್ದ. ನಾನೇ ಅಭ್ಯರ್ಥಿ ಎಂದು ಇನ್ನೂ ಅಂತಿಮವಾಗಿಲ್ಲ. ಈ ಬಗ್ಗೆ ಹಲವು ಹಂತದ ಸಭೆ ನಡೆದಿದ್ದು, ಪಕ್ಷ ಹೇಳಿದ್ರೆ ನಿಲ್ಲಲೇ ಬೇಕಾಗುತ್ತದೆ. ಯಾವೂದು ಇನ್ನೂ ಅಂತಿಮ‌ವಾಗಿಲ್ಲ ಎಂದರು.

ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೊಸದೇನೂ ನೀರಿಕ್ಷೆ ಮಾಡಲು ಸಾಧ್ಯವಿಲ್ಲ. ಕೋವಿಡ್ ಸಮಯದಲ್ಲಿ ಆಶ್ವಾಸನೆ ಕೊಟ್ಟಿದ್ದ ₹20 ಲಕ್ಷ ಕೋಟಿ ಎಲ್ಲಿ ಹೋಯಿತು?, ಏಳು ವರ್ಷದಿಂದ ನೋಡ್ತಾನೆ ಬಂದಿದ್ದೇವೆ. ಬದಲಾವಣೆ ಬಜೆಟ್ ಇವರಿಂದ ಸಿಗುವುದು ಕಷ್ಟ.

ಪೆಟ್ರೋಲ್ ಸೆಂಚುರಿ ಹೊಡೆದು ನಾಟೌಟ್ ಆಗಿದ್ದು, ಕೇಂದ್ರದವರು ಈ ಬಗ್ಗೆ ಯಾರು ಮಾತನಾಡುತ್ತಿಲ್ಲ. ಮಾತು ಕೇಳುವ ಪರಿಸ್ಥಿತಿಯಲ್ಲಿಯೂ ಇಲ್ಲ. ಕರ್ನಾಟಕ ರಾಜ್ಯಕ್ಕೆ ಬಜೆಟ್​​ನಲ್ಲಿ ತಾರತಮ್ಯ ಆಗಿದೆ ಎಂದು ಸತೀಶ್​ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details